30 ವರ್ಷಗಳ ಬಳಿಕ ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ
ಅಯೋಧ್ಯೆ, ಅಗಸ್ಟ್5: ಇಂದು ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿಯಿಂದ ಲಕ್ನೋಗೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಅಯೋಧ್ಯೆಗೆ ಆಗಮಿಸಿದ್ದಾರೆ. ಇಂದು ಅಯೋಧ್ಯೆ ರಾಮ ಜನ್ಮಭೂಮಿಯಲ್ಲಿ 12.40ಕ್ಕೆ ಭೂಮಿ ಪೂಜೆ ನೆರವೇರಲಿದೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಗಾಗಲೇ ಅಯೋಧ್ಯೆಗೆ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಅವರು ಲಕ್ನೋಗೆ ಬಂದಿಳಿದಿದ್ದರು. ಬಳಿಕ ಹೆಲಿಕಾಪ್ಟರ್ ನಲ್ಲಿ ಅಲ್ಲಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ಪ್ರಧಾನಿ ಮೋದಿ ಭೂಮಿ ಪೂಜೆಯ ಮೊದಲು ಹನುಮಾನ್ ಗಡಿಗೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಐತಿಹಾಸಿಕ ಕ್ಷಣಕ್ಕಾಗಿ ಅಯೋಧ್ಯೆ ನಗರಿ ಶೃಂಗಾರಗೊಂಡಿದ್ದು, ಎಲ್ಲೆಡೆ ಬೃಹತ್ ಎಲ್ ಇಡಿ, ಸಿಸಿಟಿವಿ ಸ್ಕ್ರೀನ್ ಇಡಲಾಗಿದ್ದು, ಸಾರ್ವಜನಿಕರು ಭೂಮಿ ಪೂಜೆ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವರದಿಗಳು ತಿಳಿಸಿದೆ.








