ನವದೆಹಲಿ : ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಹಿರಿಯ ಕ್ಯಾಬಿನೆಟ್ ಸಹೋದ್ಯೋಗಿಗೆ ಟ್ವಿಟ್ಟರ್ ನಲ್ಲಿ ಶುಭಾಶಯ ಕೋರಿದ್ದಾರೆ.
“ಶ್ರೀ ರಾಜನಾಥ್ ಸಿಂಗ್ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ರಾಜನಾಥ್ ಜಿ ಅವರ ಬುದ್ಧಿವಂತಿಕೆ ಸರ್ಕಾರಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಬಲವಾದ ಮತ್ತು ಸುರಕ್ಷಿತ ಭಾರತವನ್ನು ನಿರ್ಮಿಸುವ ಪ್ರಯತ್ನಗಳಲ್ಲಿ ಅವರು ಮುಂಚೂಣಿಯಲ್ಲಿದ್ದಾರೆ. ಅವರು ಯಾವಾಗಲೂ ಬಡವರ ಮತ್ತು ನಮ್ಮ ಶ್ರಮಶೀಲ ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದಾರೆ ಎಂದು ಮೋದಿ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.








