ಮೋದಿ ಅವರದ್ದು ನಿರಂಕುಶ ಶೈಲಿ | ಸೋನಿಯಾ ಗಾಂಧಿ ಅಸಮರ್ಥರು
ನವದೆಹಲಿ : ದಿವಂಗತ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ದಿ ಪ್ರೆಸಿಡೆನ್ಷಿಯಲ್ ಇಯರ್ಸ್ ಆತ್ಮಚರಿತ್ರೆ ಸದ್ಯ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ.
ಅದರಲ್ಲಿ ಪ್ರಣವ್ ಅವರು 2014ರ ಲೋಕಸಭಾ ಚುನಾವಣೆ ಬಗ್ಗೆ ಉಲ್ಲೇಖಿಸಿ ನರೇಂದ್ರ ಮೋದಿ, ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಬಗ್ಗೆ ಸಂಚಲನ ವ್ಯಾಖ್ಯಾನಗಳನ್ನು ಮಾಡಿದ್ದಾರೆ.
2014ರ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ರಾಜಕೀಯ ಗುರಿಯನ್ನ ಕಳೆದುಕೊಂಡಿತ್ತು. ಕಾಂಗ್ರೆಸ್ ನ ವ್ಯವಹಾರಗಳನ್ನು ನಿಭಾಯಿಸಿಲು ಸೋನಿಯಾ ಗಾಂಧಿ ಅಸಮರ್ಥರಾಗಿದ್ದರು.
ಇನ್ನು ಪ್ರಧಾನಿ ನರೇಂದ್ರ ಮೋದಿ ‘ನಿರಂಕುಶ ಶೈಲಿ’ಯ ಕಾರ್ಯವೈಖರಿ’ಯನ್ನು ಪ್ರಯೋಗಿಸಿದರೆ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಯುಪಿಎಯನ್ನು ಉಳಿಸುವುದರಲ್ಲೇ ತಲ್ಲೀನರಾಗಿದ್ದರು.
ಅದು ಆಡಳಿತದ ಮೇಲೆ ಪ್ರತಿಕೂಲ ಪರಿಣಾಮ ಬೀರಿತು ಎಂದು ಆ ಸಂದರ್ಭದಲ್ಲಿ ರಾಷ್ಟ್ರಪತಿಯಾಗಿದ್ದ ಪ್ರಣವ್ ಮುಖರ್ಜಿ ಬರೆದಿದ್ದಾರೆ.
2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕೇವಲ 44 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ ಪಕ್ಷದ ಹೀನಾಯ ಸ್ಥಿತಿಯ ಬಗ್ಗೆಯೂ ಆತ್ಮಕಥನದಲ್ಲಿ ಉಲ್ಲೇಖಿಸಿದ್ದಾರೆ.
ರೂಪಾ ಪ್ರಕಾಶನ ಪ್ರಕಟಿಸಿರುವ ಈ ಆತ್ಮಕಥನ ಮುಂದಿನ ತಿಂಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ತಾವು ರಾಷ್ಟ್ರಪತಿಯಾಗಿದ್ದ ಅವಧಿಯಲ್ಲಿನ ವಿದ್ಯಮಾನಗಳ ಬಗ್ಗೆ ಈ ಕೃತಿಯಲ್ಲಿ ಪ್ರಣಬ್ ಮುಖರ್ಜಿ ಬರೆದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









