ಮೋದಿ ಜನ್ಮದಿನ : ಭಾವನಾತ್ಮಕ ಸಾಲುಗಳನ್ನು ಬರೆದ ಅಮಿತ್ ಶಾ

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ಹೀಗಾಗಿ ಅವರ ಅಭಿಮಾನಿಗಳು ಹಾಗೂ ಬಿಜೆಪಿಯಿಂದ ಹಲವು ಸಾಮಾಜಿಕ ಕಾರ್ಯಗಳನ್ನು ಸಹ ಹಮ್ಮಿಕೊಳ್ಳಲಾಗಿದೆ. ಮೋದಿಗೆ ಹಲವು ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದರ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾವನಾತ್ಮಕ ಸಾಲುಗಳನ್ನು ಬರೆದು ಮೋದಿಗೆ ವಿಶ್ ಮಾಡಿದ್ದಾರೆ.

ಅಮಿತ್ ಶಾ ಟ್ವೀಟ್ ನಲ್ಲಿ.. ರಾಷ್ಟ್ರದ ಸೇವೆ ಮತ್ತು ಬಡವರ ಕಲ್ಯಾಣಕ್ಕೆ ಮೀಸಲಾಗಿರುವ ದೇಶದ ಅತ್ಯಂತ ಜನಪ್ರಿಯ ನಾಯಕ ಪ್ರಧಾನಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಮೋದಿ ಜಿ ರೂಪದಲ್ಲಿ, ದೇಶವು ವಂಚಿತ ವರ್ಗವನ್ನು ಅಭಿವೃದ್ಧಿಯ ಮುಖ್ಯವಾಹಿನಿಯೊಂದಿಗೆ ಸಂಪರ್ಕಿಸುವ ಮತ್ತು ಬಲವಾದ ಭಾರತದ ಅಡಿಪಾಯವನ್ನು ಹಾಕುವ ನಾಯಕತ್ವವನ್ನು ಪಡೆದುಕೊಂಡಿದೆ.

ಸದೃಡ, ಸುರಕ್ಷಿತ ಹಾಗೂ ಸ್ವಾವಲಂಬಿ ಭಾರತದವನ್ನು ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಜೀವನದ ಪ್ರತಿ ಕ್ಷಣವನ್ನೂ ಮೀಸಲಿರಿಸಿದ್ದಾರೆ. ಅವರ ನಾಯಕತ್ವದಲ್ಲಿ ರಾಷ್ಟ್ರ ಸೇವೆ ಮಾಡುತ್ತಿರುವ ನಾನೇ ಅದೃಷ್ಟಶಾಲಿ. ಎಲ್ಲ ದೇಶವಾಸಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರೋಗ್ಯ ದೀರ್ಘಾಯುಷ್ಯವನ್ನು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This