ಮೋದಿಯನ್ನ ಟೀಕೆ ಮಾಡಿದ್ರೆ ಒಳ್ಳೆಯದಾಗುವುದಿಲ್ಲ : ಮಾಧುಸ್ವಾಮಿ Madhuswamy
ಉಡುಪಿ : ಕೊರೊನಾ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವವರಿಗೆ ಒಳ್ಳೆಯದಾಗುವುದಿಲ್ಲ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ವಿಪಕ್ಷಗಳ ಆರೋಪಗಳ ಬಗ್ಗೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ 80 ಕೋಟಿ ಜನರಿಗೆ ಉಚಿತ ಕೋವಿಡ್ ಲಸಿಕೆ ನೀಡುವ ಕೇಂದ್ರದ ನಿರ್ಧಾರವನ್ನು ಟೀಕಿಸುವುದು ಸರಿಯಲ್ಲ.
ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಬೇಕಾದರೆ ಸರ್ಕಾರಕ್ಕೆ ಎಷ್ಟು ಆರ್ಥಿಕ ಹೊರೆ ಬೀಳಲಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.
ಉಚಿತ ಲಸಿಕೆಯ ಜತೆಗೆ ನವೆಂಬರ್‍ವರೆಗೂ ಉಚಿತ ಪಡಿತರ ನೀಡುವುದಾಗಿಯೂ ಸರ್ಕಾರ ಹೇಳಿದೆ. ಕೇಂದ್ರದ ವಿರುದ್ಧ ಪಾಪದ ಮಾತುಗಳನ್ನಾಡಿದರೆ ಯಾರಿಗೂ ಒಳ್ಳೆಯದಾಗುವುದಿಲ್ಲ ಎಂದರು.
ಇದೇ ವೇಳೆ ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡಿ, ರಮೇಶ್ ಜಾರಕಿಹೊಳಿ ಅವರಿಗೆ ಪಕ್ಷದಿಂದ ಯಾವ ತೊಂದರೆಯೂ ಆಗಿಲ್ಲ.
ಆಕಸ್ಮಿಕ ಘಟನೆಗೆ ಬಲಿಯಾಗಿದ್ದು, ಅವರ ಬಗ್ಗೆ ಅನುಕಂಪ ಇದೆ. ಪ್ರಕರಣದಲ್ಲಿ ಜಾರಕಿಹೊಳಿ ಅವರಿಗೆ ಶಿಕ್ಷೆ ಆಗಲಾರದು ಎಂದು ಅಭಿಪ್ರಾಯಪಟ್ಟರು.