ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ನ ಆರ್ಭಟ ಜೋರಾಗಿದೆ. ದಿನದಿಂದ ದಿನಕ್ಕೆ ಕೋವಿಡ್ ಕೇಸ್ ಗಳು ಹೆಚ್ಚಾಗುತ್ತಿದ್ದು, ಸಾಕಷ್ಟು ಮಂದಿಯನ್ನು ಹೆಮ್ಮಾರಿ ಬಲಿ ಪಡೆದುಕೊಳ್ಳುತ್ತಿದೆ. ದೇಶದಲ್ಲಿನ ಕೊರೊನಾ ಪರಿಸ್ಥಿತಿ ಬಗ್ಗೆ ಬಿಬಿಸಿ ಒಂದು ವರದಿಯನ್ನು ಮಾಡಿದ್ದು, ಇದರಲ್ಲಿ ಕೊರೊನಾ ಮರಣ ಪ್ರಮಾಣದಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದೆ.
ಬಿಬಿಸಿ ವರದಿ ಪ್ರಕಾರ ಗುಜರಾತ್ ನಲ್ಲಿ ಮರಣ ಪ್ರಮಾಣ ಶೇ.6.25ರಷ್ಟಿದ್ದು, ಮೊದಲ ಸ್ಥಾನದಲ್ಲಿದ್ದರೇ ಮಹಾರಾಷ್ಟ್ರದಲ್ಲಿ ಮರಣ ಪ್ರಮಾಣ 3.73 ಇದೆ, ರಾಜಸ್ಥಾನದಲ್ಲಿ ಶೇ.2.32, ಪಂಜಾಬ್ ಶೇ.2.17, ಪುದುಚೆರಿ ಶೇ.1.98, ಜಾರ್ಖಂಡ್ ಶೇ.0.5, ಛತ್ತೀಸ್‌ಗಢ ಶೇ.0.35 ರಷ್ಟಿದೆ.
ಮೋದಿ ವಿರುದ್ಧ ರಾಹುಲ್ ಗಾಂಧಿ ಟ್ವೀಟ್ ಕಿಡಿ
ದೇಶಾದ್ಯಂತ ಕೊರೊನಾ ವೈರಸ್ ನಿಂದ ಮೃತಪಟ್ಟ ವ್ಯಕ್ತಿಗಳ ಅಂಕೆ ಸಂಖ್ಯೆ ಮುಂದಿಟ್ಟುಕೊಂಡು ಗುಜರಾತ್ ನಲ್ಲೇ ಅತಿ ಹೆಚ್ಚು ಮರಣ ಪ್ರಮಾಣವಿದೆ ಎಂಬ ಬಿಬಿಸಿ ವರದಿಯನ್ನು ಆದರಿಸಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಗುಜರಾತ್ ಮಾದರಿ ಬಗ್ಗೆ ಲೇವಡಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕಳೆದ ಕೆಲ ವರ್ಷಗಳಿಂದ ಗುಜರಾತ್ ಮಾದರಿಯನ್ನೇ ಮುಂದಿಟ್ಟುಕೊಂಡು ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಇದರ ವಿರುದ್ಧ ಈಗಾಗಲೇ ಅಭಿಯಾನ ಆರಂಭಿಸಿರುವ ರಾಹುಲ್ ಗಾಂಧಿ, ಮತ್ತೆ ಇದೀಗ ಕೊರೊನಾವನ್ನು ಮುಂದಿಕೊಟ್ಟಿಕೊಂಡು ಗುಜರಾತ್ ಮಾದರಿಯನ್ನು ಪ್ರಶ್ನಿಸಿದ್ದಾರೆ.








