Azharuddin | ಇಂಗ್ಲೆಂಡ್ ನಲ್ಲಿ ವಿರಾಟ್ ಅಬ್ಬರಿಸೋದು ಪಕ್ಕಾ
ಟೀಂ ಇಂಡಿಯಾದ ಸ್ಟಾರ್ ಆಟಗಾರ, ಮಾಜಿ ನಾಯಕ ವಿರಾಟ್ ಕೊಹ್ಲಿ ಕಳೆದ ಕೆಲ ದಿನಗಳಿಂದ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್-2022ರಲ್ಲಿ ಕೊಹ್ಲಿ ಉತ್ತಮ ಪ್ರದರ್ಶನ ತೋರಲಿಲ್ಲ. ಈ ಋತುವಿನಲ್ಲಿ 16 ಪಂದ್ಯಗಳನ್ನು ಆಡಿರುವ ವಿರಾಟ್ ಕೇವಲ 341 ರನ್ ಗಳಿಸಿದ್ದಾರೆ.
ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿರುವ ಕೊಹ್ಲಿ, ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ಗೆ ತಂಡಕ್ಕೆ ಮರಳಲಿದ್ದಾರೆ.
ಈ ಅನುಕ್ರಮದಲ್ಲಿ ಭಾರತ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ವಿರಾಟ್ ಫಾರ್ಮ್ ಬಗ್ಗೆ ಆಸಕ್ತಿದಾಯಕ ಹೇಳಿಕೆಗಳನ್ನು ನೀಡಿದ್ದಾರೆ.
ಇಂಗ್ಲೆಂಡ್ ಸರಣಿಯಲ್ಲಿ ಕೊಹ್ಲಿ ಬಲಿಷ್ಠ ಪುನರಾಗಮನ ಮಾಡುತ್ತಾರೆ ಎಂದು ಅಜರುದ್ದೀನ್ ನಂಬಿದ್ದಾರೆ.
“ವಿರಾಟ್ ಕೊಹ್ಲಿ 50 ಕ್ಕೂ ಹೆಚ್ಚು ರನ್ ಗಳಿಸಿದ್ರೂ ಅವರು ವಿಫಲರಾಗಿದ್ದಾರೆ ಎಂದು ಟೀಕೆ ಮಾಡಲಾಗುತ್ತಿದೆ. ವಾಸ್ತವವಾಗಿ, ಈ ವರ್ಷ ಕೊಹ್ಲಿ ದೊಡ್ಡದಾಗಿ ಆಡಲಿಲ್ಲ.
ಯಾವುದೇ ಸ್ಟಾರ್ ಆಟಗಾರರ ವೃತ್ತಿ ಜೀವನದಲ್ಲಿ ಇಂತಹ ಪರಿಸ್ಥಿತಿಗಳನ್ನು ಎದುರಿಸುತ್ತಾರೆ. ಕೊಹ್ಲಿ ಕೂಡ ಅಷ್ಟೇ. ಕೆಲ ದಿನಗಳಿಂದ ವಿಶ್ರಾಂತಿ ಇಲ್ಲದೆ ಕ್ರಿಕೆಟ್ ಆಡುತ್ತಿದ್ದಾರೆ.
ಆದರೆ ಈಗ ಸ್ವಲ್ಪ ವಿಶ್ರಾಂತಿ ಪಡೆದಿದ್ದಾರೆ. ಹಾಗಾಗಿ ಇಂಗ್ಲೆಂಡ್ ಸರಣಿಯಲ್ಲಿ ಕೊಹ್ಲಿ ಫಾರ್ಮ್ಗೆ ಮರಳುತ್ತಾರೆ ಎಂದು ನಾನು ಭಾವಿಸುತ್ತೇನೆ.
ಕೊಹ್ಲಿ ಶತಕ ಬಾರಿಸಿದರೆ ಅವರ ಆತ್ಮವಿಶ್ವಾಸ ಇಮ್ಮಡಿಯಾಗಲಿದೆ’ ಎಂದು ಅಜರುದ್ದೀನ್ ಹೇಳಿದ್ದಾರೆ.