Mohammad Shami : ವಿಶ್ವಕಪ್ ಗೆ ಟೀಂ ಇಂಡಿಯಾ ಸರಿಯಾದ ಟ್ರ್ಯಾಕ್ ನಲ್ಲಿದೆ : ಶಮಿ
ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಮೊಹಮ್ಮದ್ ಶಮಿ, ವಿಶ್ವಕಪ್‌ಗೆ ಟೀಂ ಇಂಡಿಯಾದ ಸಿದ್ಧತೆಗಳನ್ನು ಬಹಿರಂಗಪಡಿಸಿದ್ದಾರೆ. ವಿಶ್ವಕಪ್‌ನಲ್ಲಿ ಇನ್ನೂ ಸಾಕಷ್ಟು ಸಮಯವಿದ್ದು, ಆಟಗಾರರನ್ನು ತಿಳಿದುಕೊಳ್ಳಲು ನಮಗೆ ಸಮಯವಿದೆ ಎಂದ ತಿಳಿಸಿದ್ದಾರೆ.
ರಾಯ್‌ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಶಮಿ 3 ವಿಕೆಟ್ ಕಬಳಿಸಿದ್ದರು. ಈ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿ ಮೂರು ಏಕದಿನ ಸರಣಿಯನ್ನು 2-0 ಅಂತರದಲ್ಲಿ ತನ್ನದಾಗಿಸಿಕೊಂಡಿತು.
ವಿಶ್ವಕಪ್ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ, ‘ನೋಡಿ, ಟೀಂ ಇಂಡಿಯಾ ಬಗ್ಗೆ ಜನರಿಗೆ ಯಾವುದೇ ರೀತಿಯ ಅನುಮಾನವಿಲ್ಲ ಎಂದು ನಾನು ಭಾವಿಸುತ್ತೇನೆ. ತಂಡದ ಮೇಲೆ ಜನರಿಗೆ ನಂಬಿಕೆ ಇದೆ. ಕಳೆದ 4-6 ವರ್ಷಗಳಲ್ಲಿ ಟೀಂ ಇಂಡಿಯಾ ಉತ್ತಮ ಫಲಿತಾಂಶಗಳನ್ನು ನೀಡಿದೆ, ಆದ್ದರಿಂದ ತಂಡದ ಪ್ರದರ್ಶನದ ಬಗ್ಗೆ ಯಾರಿಗೂ ಯಾವುದೇ ಅನುಮಾನವಿಲ್ಲ ಎಂದು ನಾನು ಭಾವಿಸುತ್ತೇನೆ. ವಿಶ್ವಕಪ್‌ಗೆ ಇನ್ನೂ ಸಾಕಷ್ಟು ಸಮಯವಿದೆ. ನಮ್ಮಲ್ಲಿ ಹಲವಾರು ಸರಣಿಗಳಿವೆ. ಅಂತಹ ಪರಿಸ್ಥಿತಿಯಲ್ಲಿ, ಆಟಗಾರರು ಅಭ್ಯಾಸಕ್ಕಾಗಿ ಸಾಕಷ್ಟು ಪಂದ್ಯಗಳನ್ನು ಹೊಂದಿರುತ್ತಾರೆ. ಮತ್ತು ಆಟಗಾರರು ಸಹ ಇತರ ಬಗ್ಗೆ ತಿಳಿದುಕೊಳ್ಳುವ ಅವಕಾಶವನ್ನು ಪಡೆಯುತ್ತಾರೆ. ಈಗ ನಮಗೆ ಸಮಯವಿದೆ, ಆದ್ದರಿಂದ ನಾವು ನಮ್ಮ ತಂತ್ರವನ್ನು ಪಂದ್ಯದಿಂದ ಪಂದ್ಯಕ್ಕೆ ಉತ್ತಮ ಪಡಿಸಿಕೊಳ್ಳುತ್ತಿದ್ದೇವೆ, ಎಂದಿದ್ದಾರೆ.
ಶಮಿ ಈಗ ಭಾರತದ ಪರ ODIಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 10 ನೇ ಬೌಲರ್ ಆಗಿದ್ದಾರೆ. ಶಮಿ ಈಗ ಆಶಿಶ್ ನೆಹ್ರಾ ಮತ್ತು ಮನೋಜ್ ಪ್ರಭಾಕರ್ ಅವರನ್ನು ಹಿಂದಿಕ್ಕಿದ್ದಾರೆ. ಶಮಿ ಈಗ ಏಕದಿನದಲ್ಲಿ ಒಟ್ಟು 159 ವಿಕೆಟ್ ಪಡೆದಿದ್ದಾರೆ.
ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಇದುವರೆಗೆ ಎರಡು ಬಾರಿ ಏಕದಿನ ವಿಶ್ವಕಪ್ ಗೆದ್ದಿದೆ. ಮೊದಲ ಬಾರಿಗೆ ಭಾರತ ತಂಡ 1983ರಲ್ಲಿ ವಿಶ್ವಕಪ್ ಗೆದ್ದಿತ್ತು. ಮತ್ತು ಕೊನೆಯ ಬಾರಿಗೆ 2011 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಗೆದ್ದಿತು. ಅಂದಿನಿಂದ ಭಾರತ ತಂಡ ಏಕದಿನ ವಿಶ್ವಕಪ್ ಗೆದ್ದಿಲ್ಲ.
Mohammed Shami: Team India on right track for World Cup
Mohammed Shami, World Cup, Team India, New Zealand