ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಮಹಮ್ಮದ್ ಶಮಿ ಲಭ್ಯ..?
ಟೀಮ್ ಇಂಡಿಯಾದ ವೇಗಿ ಮಹಮ್ಮದ್ ಶಮಿ ಅವರು ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಾಗುವ ಸಾಧ್ಯತೆಗಳಿವೆ. ಇದಕ್ಕೆ ಪೂರಕವಾಗಿ ಗಾಯದಿಂದ ಚೇತರಿಸಿಕೊಂಡಿರುವ ಮಹಮ್ಮದ್ ಶಮಿ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿಯಲ್ಲೂ ಭಾಗಿಯಾಗಿದ್ದಾರೆ.
ಮಹಮ್ಮದ್ ಶಮಿ ಅವರು ಕಳೆದ ಆಸ್ಟ್ರೇಲಿಯಾ ಪ್ರವಾಸದ ವೇಳೆ ಗಾಯಗೊಂಡಿದ್ದರು. ಆಸೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಬ್ಯಾಟಿಂಗ್ ಮಾಡುವಾಗ ಪ್ಯಾಟ್ ಕಮಿನ್ಸ್ ಅವರ ಎಸೆತದಲ್ಲಿ ಮೊಣಕೈಗೆ ಗಾಯ ಮಾಡಿಕೊಂಡಿದ್ದರು. ಆದಾದ ನಂತರ ಅವರು ಆಸೀಸ್ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಅಲ್ಲದೆ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೂ ಅಲಭ್ಯ ರಾಗಿದ್ದರು.
ಇದೀಗ ಗಾಯದಿಂದ ಚೇತರಿಸಿಕೊಂಡಿರುವ ಮಹಮ್ಮದ್ ಶಮಿ ಎನ್ ಸಿಎನಲ್ಲಿ ತರಬೇತಿಯಲ್ಲಿ ಭಾಗಿಯಾಗಿದ್ದಾರೆ. ಮೂರನೇ ಟೆಸ್ಟ್ ಪಂದ್ಯಕ್ಕೆ ಇನ್ನೂ 16 ದಿನಗಳಿವೆ. ಫೆಬ್ರವರಿ 24ರಿಂದ ಮೂರನೇ ಟೆಸ್ಟ್ ಪಂದ್ಯ ಶುರುವಾಗಲಿದೆ. ಈ ವೇಳೆ ಮಹಮ್ಮದ್ ಶಮಿ ಅವರು ಫಿಟ್ ಆಗುವ ಸಾಧ್ಯತೆಗಳಿವೆ.
ಟೀಮ್ ಇಂಡಿಯಾದ ಪ್ರಮುಖ ವೇಗಿಯಾಗಿರುವ ಮಹಮ್ಮದ್ ಶಮಿ ಅವರು ಆಗಾಗ ಗಾಯಕ್ಕೆ ತುತ್ತಾಗುತ್ತಿದ್ದಾರೆ. ಜೊತೆಗೆ ವೈಯಕ್ತಿಕ ಬದುಕಿನಲ್ಲೂ ಸಾಕಷ್ಟು ಘಾಸಿಯನ್ನು ಅನುಭವಿಸುತ್ತಿದ್ದಾರೆ. ಆದ್ರೆ ಮೈದಾನಕ್ಕೆ ಇಳಿದ ನಂತರ ಎಲ್ಲವನ್ನು ಮರೆತು ತಂಡದ ಗೆಲುವಿಗಾಗಿ ಹೋರಾಟ ನಡೆಸುತ್ತಿದ್ದಾರೆ.
.








