ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿಗೆ ಕಾರಣ ಬಿಚ್ಚಿಟ್ಟ ಶಮಿ Mohammed Shami’s ‘STUNNING’ statement saaksha tv
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಸೋತಿದ್ದು ಗೊತ್ತೆ ಇದೆ. ಆಫ್ರಿಕಾ ನೆಲದಲ್ಲಿ ಚೊಚ್ಚಲ ಸರಣಿ ಗೆಲ್ಲುವ ಆಸೆಯೊಂದಿಗೆ ದಕ್ಷಿಣ ಆಫ್ರಿಕಾದಲ್ಲಿ ಕಾಲಿಟ್ಟ ಟೀಂ ಇಂಡಿಯಾ ಮೊದಲ ಪಂದ್ಯ ಗೆದ್ದು ಬೀಗಿತ್ತು. ಆದ್ರೆ ಕೊನೆಯ ಎರಡು ಪಂದ್ಯಗಳನ್ನು ಸೋತು ಸರಣಿ ಕೈಚಲ್ಲಿತ್ತು.
ಟೀಂ ಇಂಡಿಯಾ ಕೊನೆಯ ಎರಡು ಪಂದ್ಯಗಳ ಸೋಲಿಗೆ ಇದೀಗ ವೇಗಿ ಮೊಹ್ಮದ್ ಶಮಿ ಕಾರಣ ಬಿಚ್ಚಿಟ್ಟಿದ್ದಾರೆ.
ನಾವು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸೋತಿದ್ದಕ್ಕೆ ಬೇಸರವಾಗಿದೆ. ಸರಣಿಯಲ್ಲಿ ಭಾರತದ ಬ್ಯಾಟಿಂಗ್ ಘಟಕವು ದಯನೀಯವಾಗಿ ವಿಫಲವಾಗಿತ್ತು. “ನಮ್ಮ ಬ್ಯಾಟ್ಸ್‌ಮನ್‌ಗಳು ನಿರ್ಣಾಯಕ ಕ್ಷಣಗಳಲ್ಲಿ ವಿಫಲರಾದರು. ಇದರ ಪರಿಣಾಮವಾಗಿ ನಮ್ಮ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕಳೆದುಕೊಂಡಿತು ಎಂದು ಹೇಳಿದ್ದಾರೆ.
ಈ ಸರಣಿಯಲ್ಲಿ ನಮ್ಮ ಬೌಲಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡಿತ್ತು. ಹೀಗಾಗಿಯೇ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ ತಿಣುಕಾಡಿತು. ಇನ್ನೂ 50 ರಿಂದ 60 ರನ್ ಗಳು ಹೆಚ್ಚುವರಿಯಾಗಿದ್ದಿದ್ದರೇ ನಾವು ಖಂಡಿತವಾಗಿಯೂ ದಕ್ಷಿಣ ಆಫ್ರಿಕಾದ ಕೊನೆಯ ಎರಡು ಪಂದ್ಯಗಳಲ್ಲಿ ಗೆಲ್ಲುತ್ತಿದ್ವಿ ಎಂದಿದ್ದಾರೆ ಶಮಿ.









