ಮೋಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ 4 ವಿಕೆಟ್ ಪಡೆದು ಟೆಸ್ಟ್ ಕ್ರಿಕೆಟ್‌ನಲ್ಲಿ 100 ವಿಕೆಟ್ ಗಳಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ 100 ವಿಕೆಟ್ ಕಬಳಿಸಿದ ಭಾರತದ 4ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದು ನಿಜಕ್ಕೂ ಖುಷಿಯ ವಿಚಾರವಾಗಿದ್ದರೂ, ದಶಕದ ಬಳಿಕ ಬಾರ್ಡರ್-ಗವಾಸ್ಕರ್ ಸರಣಿ ಸೋತ ಭಾರತವು WTC ಫೈನಲ್‌ನಿಂದಲೂ ಔಟ್ ಆಗಿರುವುದು ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಿಲ್ಲವೆಂಬುದು ಅಷ್ಟೇ ಸತ್ಯ….
ಸಿರಾಜ್ ಅವರ ಟೆಸ್ಟ್ ಕ್ರಿಕೆಟ್ ಸಾಧನೆ:
– ಪಂದ್ಯಗಳು: 36
– ಇನಿಂಗ್ಸ್: 67
– ಎಸೆತಗಳು: 5306
– ಎಕಾನಮಿ ರೇಟ್: 3.48
– ವಿಕೆಟ್‌ಗಳು: 100