ಬೆಂಗಳೂರು: ಇಡೀ ದೇಶವನ್ನೇ ಅಲ್ಲೋಲ-ಕಲ್ಲೋಲ ಮಾಡಿರುವ ಹೆಮ್ಮಾರಿ ಕೊರೊನಾ ವೈರಸ್ಗೆ ಸೋಮವಾರದಿಂದ ಮದ್ದು ಅರೆಯಲಾಗುತ್ತಿದೆ.
ನಾಳೆ ಅಥವಾ ಭಾನುವಾರ ರಾಜ್ಯಕ್ಕೆ ಕೊರೊನಾ ಲಸಿಕೆ ಬರುವ ಸಾಧ್ಯತೆ ಇದ್ದು, ಸೋಮವಾರದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಲಸಿಕೆ ವಿತರಣೆ ನಡೆಯಲಿದೆ.

ಮೊದಲು ಕೊರೊನಾ ವಾರಿಯರ್ಸ್ಗಳಾದ ಆರೋಗ್ಯ ಸಿಬ್ಬಂದಿ, ಪೊಲೀಸರು, ರಕ್ಷಣಾ ಸಿಬ್ಬಂದಿ ಸೇರಿದಂತೆ 6.30 ಲಕ್ಷ ಮಂದಿಗೆ ಮೊದಲ ಹಂತದಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ.
ನಾಳೆ ಸುಮಾರು 13 ಲಕ್ಷ ಡೋಸ್ ಕೊರೊನಾ ಲಸಿಕೆ ಬರುವ ಸಾಧ್ಯತೆ ಇದ್ದು, ಈಗಾಗಲೇ ಕೇಂದ್ರ ಸರ್ಕಾರ 24 ಲಕ್ಷ ಸಿರಿಂಜ್ಗಳನ್ನು ಕಳಿಸಿಕೊಟ್ಟಿದ್ದು, ಎಲ್ಲಾ ಜಿಲ್ಲೆಗಳಿಗೆ ವಿತರಣೆ ಮಾಡಲಾಗಿದೆ.

ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಸುಧಾಕರ್, ನಾಳೆ ಅಥವಾ ನಾಡಿದ್ದು, 13 ಲಕ್ಷ ಡೋಸ್ ಕೊರೊನಾ ಲಸಿಕೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು. ಮಧ್ಯಾಹ್ನದ ಹೊತ್ತಿಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿರುವ ಸುಧಾಕರ್, ನಾಳೆ ಲಸಿಕೆ ಬರಲಿದ್ದು, ಸೋಮವಾರದಿಂದ ಎಲ್ಲಾ ಜಿಲ್ಲೆಗಳಲ್ಲಿ ಕೊರೊನಾ ಲಸಿಕೆ ವಿತರಣೆ ಕಾರ್ಯ ಆರಂಭವಾಗಲಿದೆ. ಲಸಿಕೆ ಬರುತ್ತಿದ್ದಂತೆ ಎಲ್ಲಾ ಜಿಲ್ಲೆಗಳಿಗೂ ಕಳಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಲಸಿಕೆಯ ವಿವರಗಳನ್ನು ಸಂಜೆಯೊಳಗೆ ನೀಡುವುದಾಗಿ ಸುಧಾಕರ್ ಮಾಹಿತಿ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








