ಛೇ..! ಈತನೆಂಥಾ ಮಗ..? : ತಂದೆಯ ಶವ ಬೇಡ, ಆದರೆ ತಂದೆಯ ಹಣ ಬೇಕು
ಮೈಸೂರು : ತಂದೆಯ ಅಂತ್ಯಕ್ರಿಯೆ ನೀವೇ ಮುಗಿಸಿ. ಆದರೆ ತಂದೆಯ ಬಳಿ ಇರುವ 6 ಲಕ್ಷ ಹಣ ಹಾಗೂ ಇನ್ನಿತರೆ ದಾಖಲೆಗಳನ್ನು ತಂದು ಕೊಡಿ ಎಂದು ಕೊರೊನಾದಿಂದ ಮೃತಪಟ್ಟ ತಂದೆಯ ಶವ ಕೂಡ ನೋಡಲು ಬಾರದ ಮಗ ಹೇಳಿರುವ ಘಟನೆ ಮೈಸೂರಲ್ಲಿ ನಡೆದಿದೆ.
ನಗರದ ಹೆಬ್ಬಾಳದ ಸೂರ್ಯ ಬೇಕರಿ ಬಳಿಯ ಮನೆಯೊಂದರಲ್ಲಿ ವೃದ್ಧ ನಿವಾಸಿಯೊಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.
ಈ ಬಗ್ಗೆ ಕೆಲ ಮನಸ್ತಾಪಗಳಿಂದ ಅವರಿಂದ ದೂರ ಇದ್ದ ಅವರ ಮಗನಿಗೆ ಸ್ಥಳೀಯ ಮಹಾ ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್ ಫೋನ್ ಮಾಡಿ ವಿಷಯ ಮುಟ್ಟಿಸಿದ್ದಾರೆ.
ಆಗ ಪುತ್ರಮಹಾಶಯ, ನನ್ನ ತಂದೆಯ ಅಂತ್ಯಕ್ರಿಯೆ ನೀವೆ ಮುಗಿಸಿ, ಅವರ ಬಳಿ ಇರುವ 6 ಲಕ್ಷ ಹಣ ಹಾಗೂ ಇನ್ನಿತರೆ ದಾಖಲೆಗಳನ್ನು ತಂದು ಕೊಡಿ.
ನಾನು ಮೈಸೂರಿನ ಕುವೆಂಪು ನಗರದ ಶಾಂತಿ ಸಾಗರ್ ಕಾಂಪ್ಲೆಕ್ಸ್ ಬಳಿ ಇದ್ದೇನೆ. ಅಲ್ಲಿಗೆ ಹಣ , ದಾಖಲೆ ಎಲ್ಲಾ ತಂದು ಕೊಟ್ಟು ಬಿಡಿ ಎಂದು ಹೇಳಿದ್ದಾನೆ.