ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering Case) ಜಾರಿ ನಿರ್ದೇಶನಾಲಯವು ಜಾರ್ಖಂಡ್ ಸಚಿವರನ್ನು ಬಂಧಿಸಿದೆ.
ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ (Alamgir Alam) ಅರೆಸ್ಟ್ ಆಗಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮತ್ತು ಅವರ ಮನೆಕೆಲಸಗಾರ ಜಹಾಂಗೀರ್ ಆಲಂ ಮನೆಯಲ್ಲಿ 35 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿತ್ತು. ವಶಪಡಿಸಿಕೊಂಡ ಮರುದಿನವೇ ಇಬ್ಬರನ್ನೂ ಇಡಿ ಬಂಧಿಸಿತ್ತು. ಸದ್ಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರನ್ನು ಬಂಧಿಸಲಾಗಿದೆ. ಬಂಧಿಸಿ 10 ಗಂಟೆಗಳ ಕಾಲ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಸಚಿವ ಅಲಂಗೀರ್ ಆಲಂ, ಚುನಾವಣೆ ಹೊತ್ತಿನಲ್ಲೇ ಇಡಿ ದಾಳಿ ನಡೆಸುತ್ತಿದೆ. ನಾನು ಏನನ್ನು ಹೇಳುವುದಿಲ್ಲ. ಜನರೇ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮೇ 6ರಂದು ಇಡಿ ಅಧಿಕಾರಿಗಳ ತಂಡ ರಾಂಚಿಯ ವಿವಿಧೆಡೆ ದಾಳಿ ನಡೆಸಿತ್ತು. ಈ ವೇಳೆ ಅಧಿಕಾರಿಗಳು ಬರೋಬ್ಬರಿ 32 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದರು.