ಬೆಂಗಳೂರು : 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ (Annabhagya Scheme)ಯ 5 ಕೆ.ಜಿ ಅಕ್ಕಿ ಕೊಡಲಾಗುವುದು. ನಂತರ 5 ಕೆ.ಜಿ ಅಕ್ಕಿಯ ಬದಲು ಅದರ ಹಣವನ್ನು ನೀಡುವುದಾಗಿ ಸರ್ಕಾರ ನಿರ್ದರಿಸಿದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಅಕ್ಕಿ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದು, 5 ಕೆಜಿ ಅಕ್ಕಿ ನೀಡಿ, ಇನ್ನುಳಿದ ಹಣವನ್ನು ಖಾತೆದಾರರಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೇ, 10 ಕೆ.ಜಿ ಅಕ್ಕಿ ಬದಲಿಗೆ 8 ಕೆ.ಜಿ ಅಕ್ಕಿ, 2 ಕೆ.ಜಿ ರಾಗಿ/ಗೋಧಿ ಅಥವಾ ಜೋಳ ಕೊಡುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ. ಈ ಸಂದರ್ಭದಲ್ಲಿ 5 ಕೆ.ಜಿ ಅಕ್ಕಿ ಕೊಟ್ಟು ಇನ್ನೂ 5 ಕೆ.ಜಿ ಅಕ್ಕಿಗೆ ಹಣ ಕೊಡುವುದರ ಕುರಿತು ನಿರ್ಧಾರ ಮಾಡಲಾಯಿತು ಎಂದು ಹೇಳಿದರು.
15 ಲಕ್ಷ ಟನ್ ಅನ್ನು ಓಪನ್ ಟೆಂಡರ್ ಕರೆದು ಕೇಂದ್ರದವರು ಕೊಟ್ಟಿದ್ದಾರೆ. ಆದರೆ ನಮಗೆ ಅಕ್ಕಿ ಕೊಡಲು ನಿರಾಕರಣೆ, ರಾಜಕೀಯ ಮಾಡಿದರು. ಎಫ್ ಸಿಐ 34 ರೂ. ದರ ಫಿಕ್ಸ್ ಮಾಡಿದ್ದಾರೆ. ಎಫ್ ಸಿಐ ರೇಟ್ ಗೆ ಬೇರೆ ಸಂಸ್ಥೆಗಳು ಅಕ್ಕಿ ಕೊಡಲು ಮುಂದೆ ಬಂದಿಲ್ಲ. ಹೀಗಾಗಿ 34 ರೂ. ಹಣ ನೀಡುತ್ತೇವೆ ಎಂದು ಹೇಳಿದ್ದಾರೆ.





![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)

![technologies-aerospace-defense-manufacturing-unit-devanahalli]](https://saakshatv.com/wp-content/uploads/2026/10/areo-350x247.png)
