ರಾಯಚೂರು: ಒಂದೇ ಶಾಲೆಯ 18 ಮಕ್ಕಳಲ್ಲಿ ಮಂಗನ ಬಾವು ಕಾಣಿಸಿಕೊಂಡಿದ್ದು, ಆತಂಕ ವ್ಯಕ್ತವಾಗುತ್ತಿದೆ.
ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ನೀರಲಕೇರೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯೇ ಈ ರೀತಿ ಮಂಗನ ಬಾವು ಕಂಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ, 302 ಮಕ್ಕಳ ಆರೋಗ್ಯ ತಪಾಸಣೆ ಮಾಡಿದ್ದಾರೆ. ಈ ಪೈಕಿ 18 ಮಕ್ಕಳಲ್ಲಿ ರೋಗ ಪತ್ತೆಯಾಗಿದೆ. ವೈದ್ಯರ ತಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಿದ್ದಾರೆ.
ಈಗಾಗಲೇ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಂಗನಬಾವು ಕಾಣಿಸಿಕೊಂಡಿದ್ದು, ಆತಂಕ ವ್ಯಕ್ತವಾಗಿತ್ತು. ಇದರ ಮಧ್ಯೆ ಉತ್ತರ ಕರ್ನಾಟಕ ಭಾಗಕ್ಕೂ ಎಂಟ್ರಿ ಕೊಟ್ಟಿದ್ದಕ್ಕೆ ಮತ್ತಷ್ಟು ಆತಂಕ ವ್ಯಕ್ತವಾಗುತ್ತಿದೆ.