ಚಿಕ್ಕಮಗಳೂರು: ಸೌದೆ ತರಲು ಹೋಗಿದ್ದ 7 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಘಟನೆ ಕೊಪ್ಪ ತಾಲೂಕಿನ ಬರೇಗುಂಜಿ ಗ್ರಾಮದಲ್ಲಿ ನಡೆದಿದೆ.
ಕಾಡಿಗೆ ಸೌದೆ ತರಲು ಹೋಗಿದ್ದ 21 ಜನರ ರಕ್ತವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ಮಾಡಿದ್ದರು. ಈ ಪೈಕಿ 7 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 19ಕ್ಕೆ ಏರಿಕೆ ಕಂಡಿದೆ.
ಈಗಾಗಲೇ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ.