ಕಾರವಾರ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಜಿಲ್ಲೆಯ ಸಿದ್ದಾಪುರದ ಇಬ್ಬರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ನಿಪ್ಲಿಯ 40 ವರ್ಷದ ವ್ಯಕ್ತಿಯೋರ್ವರಲ್ಲಿ ಹಾಗೂ ಕೊರ್ಲಕೈ ಗ್ರಾಮದ 10 ವರ್ಷದ ಬಾಲಕನಲ್ಲಿ ಕೆ.ಎಫ್.ಡಿ ಪತ್ತೆಯಾಗಿದೆ. 40 ವರ್ಷದ ವ್ಯಕ್ತಿಯನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆ ಹಾಗೂ ಬಾಲಕನನ್ನು ಶಿರಸಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತೀಚೆಗಷ್ಟೇ ಸಿದ್ದಾಪುರ ಪ್ರದೇಶದಲ್ಲಿ ಮಂಗನ ಕಾಯಿಲೆ ಉಲ್ಭಣವಾಗಿತ್ತು. ಸದ್ಯ ಮತ್ತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.