ಕೇರಳದಲ್ಲಿ ಮೊದಲ ಮಂಕಿ ಫಾಕ್ಸ್ ಪ್ರಕರಣ ಪತ್ತೆಯಾದ ಐದು ದಿನಗಳ ನಂತರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.. ಕಣ್ಣೂರು ಜಿಲ್ಲೆಯಲ್ಲಿ ಎರಡನೇ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
31 ವರ್ಷದ ಕಣ್ಣೂರು ಮೂಲದ ವ್ಯಕ್ತಿಯೊಬ್ಬರು ಸೋಂಕಿಗೆ ಒಳಗಾಗಿದ್ದು, ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಜುಲೈ 13 ರಂದು ದುಬೈನಿಂದ ಹಿಂತಿರುಗಿದ್ದರು.
ಅವರ ಮಾದರಿಗಳನ್ನು NIV ಪುಣೆಗೆ ಕಳುಹಿಸಿದಾಗ ಪಾಸಿಟಿವ್ ಇರುವುದು ದೃಢಶವಾಗಿದೆ.. ಅವರೊಂದಿಗೆ ನಿಕಟ ಸಂಪರ್ಕದಲ್ಲಿರುವವರ ಮೇಲೆ ನಿಗಾ ಇರಿಸಲಾಗಿದೆ ಎಂದು ಜಾರ್ಜ್ ಹೇಳಿದರು.
ಕಳೆದ ವಾರ, ಜುಲೈ 13 ರಂದು ಕೇರಳದಿಂದ ಮೊದಲ ಮಂಗನ ಕಾಯಿಲೆ ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಯುಎಇಯಿಂದ ಬಂದ 35 ವರ್ಷದ ವ್ಯಕ್ತಿಯನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.