ಕೇರಳದಲ್ಲಿ ಮಂಕಿ ಪಾಕ್ಸ್ ನ ಎರೆಡು ಪ್ರಕರಣಗಳು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.. ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ವಿಮಾನ ನಿಲ್ದಾಣಗಳಲ್ಲೂ ಹೈ ಅಲರ್ಟ್ ಘೋಷಿಸಿದೆ. ವಿದೇಶಗಳಿಂದ ಬರುವವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸುವಂತೆ ಸೂಚಿಸಿದೆ.
ಈ ಕುರಿತು ಆರೋಗ್ಯ ಸಚಿವಾಲಯ ತುರ್ತು ಅದೇಶ ಹೊರಡಿಸಿದ್ದು, ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಗಳಂತೆ ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಇದರಿಂದ ಮಂಕಿಪಾಕ್ಸ್ ಹರಡುವುದನ್ನು ತಡೆಗಟ್ಟಬಹುದು ಎಂದು ಹೇಳಿದೆ.
ದುಬೈನಿಂದ ಬಂದಿದ್ದ ಕೇರಳದ ಕಣ್ಣೂರಿನ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ತಗುಲಿರುವುದು ಪತ್ತೆಯಾಗಿತ್ತು. ಇದು ದೇಶದಲ್ಲಿ ಪತ್ತೆಯಾದ 2ನೇ ಪ್ರಕರಣವಾಗಿತ್ತು. ಇದಕ್ಕೂ ಮುನ್ನ ಕೇರಳದ ಕೊಲ್ಲಂ ಜಿಲ್ಲೆಯ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ದೃಢಪಟ್ಟಿತ್ತು.