ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುತ್ತಿದ್ದು ಕೃಷಿ ಚಟುವಟಿಕೆಗೆ ಚಾಲನೆ ಸಿಕ್ಕಿದೆ.
ದಕ್ಷಿಣ ಕನ್ನಡ ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ. ಮಂಗಳೂರು ಸೇರಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನಾದ್ಯಾಂತ ವರುಣನ ಅಬ್ಬರ ಜೋರಾಗಿದೆ. ಮುಂದಿನ ನಾಲ್ಕು ದಿನ ಭಾರೀ ಗಾಳಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮುಂಗಾರು ಅಬ್ಬರ ಶುರುವಾಗಿದೆ. ಹೀಗಾಗಿ ರೈತರು ಭತ್ತದ ನಾಟಿ ಕೆಲಸ ಆರಂಭಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿದೆ. ಕಾರವಾರ, ಅಂಕೋಲ, ಕುಮಟ, ಹೊನ್ನಾವರ, ಕುಂದಾಪುರ, ಉಡುಪಿ, ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆ ಜೋರಾದ್ದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಹೀಗಾಗಿ, ಸಾಂಪ್ರದಾಯಿಕ ಮೀನುಗಾರಿಕೆ ಸ್ಥಗಿತ ಮಾಡಲಾಗಿದೆ.
ಉತ್ತರ ಕರ್ನಾಟಕದ ಭಾಗದಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಆಗುತ್ತಿದೆ. ಹತ್ತಿ, ಜೋಳ, ಶೇಂಗಾ ಸೇರಿದಂತೆ ಮುಂಗಾರು ಬೆಳೆಗಳ ಬಿತ್ತನೆ ಕಾರ್ಯದಲ್ಲಿ ರೈತರು ಬ್ಯುಸಿಯಗಿದ್ದಾರೆ.
KSRLPSನಲ್ಲಿ ಉದ್ಯೋಗಾವಕಾಶಗಳು – ಈಗಲೇ ಅರ್ಜಿ ಸಲ್ಲಿಸಿ!
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸಂಘವು ಗ್ರಾಮೀಣ ಭಾಗದ ಜೀವನೋಪಾಯವನ್ನು ಬೆಂಬಲಿಸಲು ಹಾಗೂ ಅಭಿವೃದ್ಧಿಗೆ ಕೈಗೊಂಡಿರುವ...