ರಾಜ್ಯದಲ್ಲಿ ಮುಂಗಾರು Monsoon ಚುರುಕು : ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಜಿಲ್ಲೆಗಲ್ಲಿ ಭಾರಿ ವರ್ಷಧಾರೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ಆರೆಂಟ್ ಅಲರ್ಟ್ ಘೋಷಣೆ ಮಾಡಿದೆ.
ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಆರಂಜೆ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸೋಮವಾರದ ತನಕವೂ ಮುಳೆ ಮುಂದುವರೆಯಲಿದೆ.
ಕರಾವಳಿಯಲ್ಲಿ 3.9 ಮೀಟರ್ ನಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಇತ್ತ ಮುಂಬೈ ಕರ್ನಾಟಕ ಭಾಗದ ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಯೆಲ್ಲೊ ಅಲರ್ಟ್ ಅಲರ್ಟ್ ಘೋಷಿಸಲಾಗಿದೆ.









