ಮುಂಗಾರು ಚುರುಕು : ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಗಾಳಿ ಸಹಿತ ಜೋರು ಮಳೆಯಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಗದಗ, ಕೋಲಾರ ಭಾಗದಲ್ಲಿ ಮಳೆ ಅಬ್ಬರಿಸಿದೆ.
ಅಲ್ಲದೆ ಇಂದಿನಿಂದ ಒಂದು ವಾರದ ಕಾಲ ಗುಡುಗುಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹಲವು ಕಡೆ ಮೋಡ ಕವಿದ ವಾತಾವರಣವಿರುತ್ತದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 16ರ ವರೆಗೆ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ,
ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಗದಗ, ಕೋಲಾರ,
ಕೊಪ್ಪಳ, ದಾವಣಗೆರೆ ಹಾಗೂ ತುಮಕೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಪ್ರತೀ 24 ತಾಸುಗಳಲ್ಲಿ ಜಿಲ್ಲೆಯಲ್ಲಿ 64 ರಿಂದ 115 ಮಿ.ಮೀ. ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.