ಸಂಸತ್ ಅಧಿವೇಶನ Monsoon session | ವಿಪಕ್ಷಗಳ ಗದ್ದಲ.. ಅರ್ಥಪೂರ್ಣ ಚರ್ಚೆ ಮಾಡಿ ಎಂದ ನಮೋ
ನವದೆಹಲಿ : ಇಂದಿನ ಸಂಸತ್ ಅಧಿವೇಶನ ಪ್ರಾರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನೂತನ ಸಚಿವರನ್ನು ಸಂಸತ್ ಗೆ ಪರಿಚಯಿಸಿಕೊಟ್ಟರು. ಬಳಿಕ ಸಭೆಯನ್ನುದ್ದೇಶಿ ಮೋದಿ ಮಾತಾಡುತ್ತಿದ್ದಂತೆ ವಿಪಕ್ಷಗಳು ಗದ್ದಲ ಎಬ್ಬಿಸಿದವು. ಇದರಿಂದಾಗಿ ಕಲಾಪವನ್ನು ಮುಂದೂಡಲಾಯಿತು. ಇತ್ತ ರಾಜ್ಯಸಭೆಯಲ್ಲೂ ವಿಪಕ್ಷಗಳ ಗದ್ದಲ ಇದ್ದ ಕಾರಣ ಕಲಾಪ ಮುಂದೂಡಲಾಗಿದೆ.
ಇನ್ನು ಅಧಿವೇಶದಲ್ಲಿ ಭಾಗಿಯಾಗುವುದಕ್ಕೂ ಮುನ್ನ ಮಾತನಾಡಿದ್ದ ಪ್ರಧಾನಿ, ವಿಪಕ್ಷಗಳು ಸರ್ಕಾರಕ್ಕೆ ತೀಕ್ಷ್ಣವಾದ, ಕಠಿಣವಾದ ಪ್ರಶ್ನೆಗಳನ್ನು ಕೇಳಬೇಕು. ಇಡೀ ಜಗತ್ತು ಕೋವಿಡ್ ನಿಂದ ತತ್ತರಿಸಿರುವ ಸಂದರ್ಭದಲ್ಲಿ ಅಧಿವೇಶನದ ಸಮಯವನ್ನು ಹಾಳು ಮಾಡುಬಾರದು. ಸಂಸತ್ತಿನಲ್ಲಿ ಅರ್ಥಪೂರ್ಣ ಚರ್ಚೆಗಳನ್ನು ಮಾಡಲು ನಾನು ಬಯಸುತ್ತೇನೆ ಎಂದು ಹೇಳಿದರು.
ಸಂಸದರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಅವರು ಕೇಳುವ ಪ್ರಶ್ನೆಗಳಿಗೆ ಸತ್ಯವನ್ನು ಹೇಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸುತ್ತೇವೆ ಎಂದು ಮೋದಿ ಹೇಳಿದ್ದಾರೆ.