ರಾಜ್ಯಕ್ಕೆ ಮುಂಗಾರು.. ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಬೆಂಗಳೂರು : ಅಬ್ಬರಿಸುತ್ತಾ ಮುಂಗಾರು ರಾಜ್ಯಕ್ಕೆ ಪ್ರವೇಶ ಮಾಡಿದ್ದು, ಮೂರು ಜಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ವಾಡಿಕೆಯಂತೆ ಜೂನ್.1ರಂದೇ ಪ್ರವೇಶವಾಗಬೇಕಿದ್ದ ಮುಂಗಾರು ಮಾರುತಗಳು ನಾಲ್ಕು ದಿನ ತಡವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳನ್ನು ಪ್ರವೇಶಿಸಿವೆ.
ಇಂದು ನೈಋತ್ಯ ಮುಂಗಾರು ಉತ್ತರ ಒಳನಾಡಿನ ಪ್ರದೇಶ ತಲುಪಲಿದೆ. ಆ ಮೂಲಕ ರಾಜ್ಯದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇವತ್ತು ಉತ್ತರ ಒಳನಾಡನ್ನು ಹಾದು ಹೋಗುವ ಮೂಲಕ ಈ ಮಾರುತಗಳು ಇಡೀ ರಾಜ್ಯ ಆವರಿಸಲಿವೆ. ಮುಂಗಾರು ಅರಂಭವಾದ ಮೊದಲ ದಿನವೇ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ದಾಖಲಾಗಿದೆ.
ಇದೇ ರೀತಿ ಜೂನ್ 6ರವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಕಡೆಗಳಲ್ಲಿ ಗುಡುಗು ಮತ್ತು ಗಾಳಿ ಸಹಿತ ಮಳೆ ಮುಂದುವರೆಯಲಿದೆ.
ಇಂದಿನಿಂದ ಅಧಿಕ ಮಳೆಯಾಗುವ ಕಾರಣದಿಂದಾಗಿ ಉಡುಪಿ, ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಿದೆ.










