ಸಿಧು ಮೂಸೆವಾಲಾ ಹತ್ಯೆ ಆರೋಪಿ ಪೊಲೀಸ್ ಕಸ್ಟಡಿಯಿಂದ ಪರಾರಿ..
ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಗ್ಯಾಂಗ್‌ಸ್ಟರ್ ದೀಪಕ್ ಟಿನು ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದಾನೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.
ಮಾನ್ಸಾ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ಗೋಯಿಂದ್ವಾಲ್ ಸಾಹಿಬ್ ಜೈಲಿನಿಂದ ಪ್ರೊಡಕ್ಷನ್ ವಾರಂಟ್ ಮೇಲೆ ಕರೆತಂದಾಗ ಶನಿವಾರ ರಾತ್ರಿ ಟಿನು ಪರಾರಿಯಾಗಿದ್ದಾನೆ. ಟಿನುವನ್ನು ಹಿಡಿಯಲು ಪೊಲೀಸರು ಮತ್ತೊಮ್ಮೆ ಬಲೆ ಬೀಸಿದ್ದಾರೆ.
ಟಿನು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತ ಸಹಾಯಕನಾಗಿ ಗುರುತಿಸಿಕೊಂಡಿದ್ದು, ಪಂಜಾಬಿ ಗಾಯಕ ಸಿಧು ಮೂಸೆವಾಲ ಕೊಲೆ ಪ್ರಕರಣದ ಆರೋಪಿಯೂ ಆಗಿದ್ದಾನೆ.
ಘಟನೆಯ ಬಗ್ಗೆ ಕೇಳಿದಾಗ, ಬಟಿಂಡಾ ರೇಂಜ್‌ನ ಇನ್ಸ್‌ಪೆಕ್ಟರ್ ಜನರಲ್ ಮುಖ್ವಿಂದರ್ ಸಿಂಗ್ ಚೀನಾ ಅವರು ಫೋನ್ ಮೂಲಕ ಪಿಟಿಐಗೆ ತಿಳಿಸಿದರು, “ನಾವು ಅದರ ಮೇಲೆ ಕೆಲಸ ಮಾಡುತ್ತಿದ್ದೇವೆ, ನಾವು ಶೀಘ್ರದಲ್ಲೇ ಅವನನ್ನು ಹಿಡಿಯುತ್ತೇವೆ.” ಎಂದು ತಿಳಿಸಿದ್ದಾರೆ.
ಮೇ 29 ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೂಸೆವಾಲಾ ಎಂದು ಜನಪ್ರಿಯರಾಗಿರುವ ಶುಭದೀಪ್ ಸಿಂಗ್ ಸಿಧು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಅವರು ತಮ್ಮ ಸ್ನೇಹಿತ ಮತ್ತು ಸೋದರಸಂಬಂಧಿಯೊಂದಿಗೆ ಜೀಪ್‌ನಲ್ಲಿ ಮಾನ್ಸಾದ ಜವಾಹರ್ ಕೆ ಗ್ರಾಮಕ್ಕೆ ತೆರಳುತ್ತಿದ್ದಾಗ ಅವರು ಸಾವನ್ನಪ್ಪಿದ್ದಾರೆ.
ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿರುವ 24 ಆರೋಪಿಗಳಲ್ಲಿ ಟಿನು ಸೇರಿದ್ದಾರೆ.
Moosewala murder case: Accused gangster Deepak Tinu escapes from police custody