ಹಾವೇರಿ: ನೈತಿಕ ಪೊಲೀಸ್ ಗಿರಿಯ ಮತ್ತೊಂದು ಪ್ರಕರಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, 7 ಜನ ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಅಬ್ದುಲ್ ಖಾದರ್ ಮುದಗಲ್, ಮನ್ಸೂರ್ ತಾಂಡೂರು, ಮೆಹಬೂಬಖಾನ್ ಬಡಿಗೇರ, ರೀಯಾಜ್,ಅಲ್ಪಾಜ್ ಬಳಿಗಾರ, ಅಬ್ದುಲ್ ದೇಸೂರ, ಖಾದರ್ ಕಣಕೆ, ಸಲೀಂ ಸಾಬ್ ಖಾಜಿ, ಮಹಬೂಬ್ ಅಲಿ ಹಿಂದೂ ವ್ಯಕ್ತಿಯೊಬ್ಬನ ಜೊತೆ ಕಾಣಿಸಿಕೊಂಡಿದ್ದರು ಎಂಬ ಕಾರಣಕ್ಕೆ ಮುಸ್ಲಿಂ ಯುವತಿಯ (Muslim Women) ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದೆ. ಹಲ್ಲೆಗೆ ಒಳಗಾದ ಮುಸ್ಲಿಂ ಯುವತಿಯು ತನ್ನ ಸಂಬಂಧಿಕರ ಮನೆಗೆ ತೆರಳುತ್ತಿದ್ದಳು ಎನ್ನಲಾಗಿದೆ. ಈ ಸಂದರ್ಭದಲ್ಲಿ ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಜಗದೀಶ್ ಎಂಬ ವ್ಯಕ್ತಿ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.
ಬ್ಯಾಡಗಿ ಪಟ್ಟಣದಲ್ಲಿ ಪುರಸಭೆ ಹತ್ತಿರ ಇರುವ ಶಿವನ ದೇವಸ್ಥಾನದ ಬಳಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಯುವತಿಯನ್ನು ಎಳೆದಾಡಿ ಕಪಾಳಕ್ಕೆ ಹೊಡೆದು ಸಾರ್ವಜನಿಕ ಸ್ಥಳದಲ್ಲಿ ಅವಮಾನ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹೀಗಾಗಿ 9 ಜನರ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ, 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.