ವಸತಿ ಶಾಲೆಯಲ್ಲಿ ಅಹಾರ ಸೇವಿಸಿ 95 ಮಕ್ಕಳು ಅಸ್ವಸ್ಥ….
ದಾವಣಗೆರೆ ಜಿಲ್ಲೆ ಜಗಳೂರು ತಾಲೋಕಿನ ಅಲ್ಪ ಸಂಖ್ಯಾತರ ಮೊರಾರ್ಜಿ ಬಾಲಕಿಯ ವಸತಿ ಶಾಲೆಯಲ್ಲಿ ವಿಷ ಆಹಾರ ಸೇವಿಸಿ 95 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. . ಅಸ್ವಸ್ಥ ಮಕ್ಕಳನ್ನು ತಕ್ಷಣವೇ ಜಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ತಾಲೂಕು ವೈಧ್ಯಾಧಿಕಾರಿ ಡಾ. ನಾಗರಾಜ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಸತಿ ಶಾಲೆಯ ಮಕ್ಕಳು ನಿನ್ನೆ ರಾತ್ರಿ ಅನ್ನ ಸಾಂಬಾರ್ ಮತ್ತು ಬೆಳಿಗ್ಗೆ ಚಿತ್ರಾನ್ನ ಸೇವಿಸಿದ್ದ ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಹಾರ ಸೇವಿಸಿದ ನಂತರ ಮಕ್ಕಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಅನ್ನ ಸೇವಿಸಿದ ನಂತರ ಮಕ್ಕಳಲ್ಲಿ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿದೆ. 95 ಮಕ್ಕಳು ಆಹಾರ ಸೇವಿಸಿ ಅಸ್ವಸ್ಥರಾಗಿದ್ದು, ಇವರಲ್ಲಿ 50 ಮಕ್ಕಳನ್ನು ಜಗಳೂರು ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಉಳಿದ ಮಕ್ಕಳಿಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಮಕ್ಕಳು ಅಸ್ವಸ್ಥರಾಗಿರುವ ವಿಷಯ ತಿಳಿಯುತ್ತಿದ್ದಂತೆಯೇ, ಮಕ್ಕಳ ತಜ್ಞ ಜಯಕುಮಾರ್, ತಹಶೀಲ್ದಾರ್ ಶಶಿಧರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳು ಸೇವಿಸಿದ ಆಹಾರವನ್ನ ಪರೀಕ್ಷೆಗೆ ಕಳುಹಿಸಲಾಗಿದೆ.