Morbi Bridge : ಮೋರ್ಬಿ ದುರಂತ ಸ್ಥಳಕ್ಕೆ ಇಂದು ಪ್ರಧಾನಿ ಮೋದಿ ಬೇಟಿ…
ಗುಜರಾತ್ನಲ್ಲಿ ಸಂಭವಿಸಿದ ಕೇಬಲ್ ಸೇತುವೆ ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಇಂದು ಮಧ್ಯಾಹ್ನ 3.45 ರ ಸುಮಾರಿಗೆ ಮೋರ್ಬಿ ತಲುಪಲಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಲಿದ್ದು, ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಸೋಮವಾರ ಗುಜರಾತ್ನ ಬನಸ್ಕಾಂತದ ಸಾರ್ವಜನಿಕ ಸಭೆಯಲ್ಲಿ ಮೊರ್ಬಿ ಅಪಘಾತವನ್ನು ಪ್ರಸ್ತಾಪಿಸಿ ಪ್ರಧಾನಿ ಮೋದಿ ಭಾವುಕರಾಗಿದ್ದರು. ಇಡೀ ಘಟನೆಯ ಮೇಲೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಕಣ್ಣಿಟ್ಟಿದ್ದಾರೆ. ತಡರಾತ್ರಿಯವರೆಗೂ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹಾಗೂ ಇತರ ಅಧಿಕಾರಿಗಳೊಂದಿಗೆ ಪರಿಹಾರ ಕಾರ್ಯದ ಕುರಿತು ವಿಚಾರಿಸಿದರು.
ಈ ಅಪಘಾತದ ತನಿಖೆ ನಡೆಸುತ್ತಿರುವ ಎಸ್ಐಟಿ 9 ಜನರನ್ನು ಬಂಧಿಸಿದೆ. ಬಂಧಿತರಲ್ಲಿ ಸೇತುವೆ ನಿರ್ವಿುಸುವ ಕಂಪನಿಯ ಮ್ಯಾನೇಜರ್ ಕೂಡ ಸೇರಿದ್ದಾರೆ. ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಕಂಪನಿಯ ಜನರ ವಿರುದ್ಧ ಐಪಿಸಿ ಸೆಕ್ಷನ್ 304, 308 ಮತ್ತು 114 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Morbi Bridge: Prime Minister Modi visited the Morbi disaster site today…