ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಹೆಚ್ಚು ಮನೆ ನಿರ್ಮಾಣ : ಸೋಮಣ್ಣ Somanna saaksha tv
ಬೆಂಗಳೂರು : ರಾಜ್ಯದಲ್ಲಿ ಬಡವರಿಗೆ 18 ಲಕ್ಷ ಮನೆಗಳ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಕಳೆದ 2 ವರ್ಷ 4 ತಿಂಗಳ ಅವಧಿಯಲ್ಲಿ 4 ಸಾವಿರದ 400 ಕೋಟಿ ಹಣ ವೆಚ್ಚದಲ್ಲಿ 2 ಲಕ್ಷದ 75 ಸಾವಿರ ಮನೆಗಳನ್ನು ಪೂರ್ಣವಾಗಿ ನಿರ್ಮಾಣ ಮಾಡಲಾಗಿದೆ. ಉಳಿದ 5 ಲಕ್ಷ ಮನೆಗಳು ನಿರ್ಮಾಣ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.
ಇನ್ನು ಸ್ವಂತ ಭೂಮಿ ಇರುವ ಬವಡರಿಗೆ ಮನೆ ನಿರ್ಮಾಣಕ್ಕೆ ಜಿಪಿಎಸ್ ಮುಖಾಂತರ ಹಣ ವರ್ಗಾವಣೆ ಮಾಡಲಾಗಿದೆ. ಈ ಎಲ್ಲಾ ಕಾರ್ಯಗಳು ಪಾರದರ್ಶಕವಾಗಿ ನಡೆಯುತ್ತಿವೆ. 6 ಸಾವಿರ 600 ಗ್ರಾಮ ಪಂಚಾಯಿತಿಗಳಲ್ಲಿರುವ ಶೋಷಿತ ಹಾಗೂ ಹಿಂದುಳಿದ ಅಲೆಮಾರಿ, ಅರೆ ಅಲೆಮಾರಿ, ಸುಡುಗಾಡು ಸಿದ್ದ , ಕಾಡುಗೊಲ್ಲ ಸೇರಿದಂತೆ ವಿವಿಧ ಸಮಯದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸ್ವಂತ ಸೂರು ನಿರ್ಮಾಣ ಮಾಡಿಕೊಡಲಾಗುವುದು. ಬೆಂಗಳೂರು ನಗರವೊಂದರಲ್ಲೇ 1 ಲಕ್ಷಕ್ಕೂ ಹೆಚ್ಚು ಮನೆ ನಿರ್ಮಾಣ ಮಾಡಲಾಗುತ್ತಿದೆ ಎಂದು ವಿವರಿಸಿದರು.









