ಬೆಂಗಳೂರು ಗ್ರಾಮಾಂತರ: ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಆನೇಕಲ್ ಕಲುಷಿತ ನೀರು (contaminated water) ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಈ ಘಟನೆ ಮಹಾವೀರ್ ರಾಂಚಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮಕ್ಕಳು ಅಸ್ವಸ್ಥ ನೀರು ಕುಡಿದು ಬೆಳಿಗ್ಗೆಯಿಂದ ಜ್ವರ, ವಾಂತಿ, ಭೇದಿಯಿಂದ ಮಕ್ಕಳು ಬಳಲುತ್ತಿದ್ದಾರೆ. ಸಿಂಗಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಬ್ಬರು ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್ದು, ಮತ್ತಿಬ್ಬರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದ ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.
ಕಲುಷಿತ ನೀರು ಸೇವನೆಯಿಂದ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಅಪಾರ್ಟ್ಮೆಂಟ್ನ ಬಿಲ್ಡರ್ಸ್ ವಿರುದ್ಧ ಸಿಂಗಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಿಂದ ದೂರು ನೀಡಲಾಗಿದೆ.