ಮೋದಿ ಅವರನ್ನ ಮುತ್ತಿಗೆ ಹಾಕಲು ಹೊರಟಿದ್ದ ಕೈ ಕಾರ್ಯಕರ್ತರು ವಶಕ್ಕೆ…
ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುತ್ತಿಗೆ ಹಾಕಲು ಹೊರಟಿದ್ದ ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಪಿಸಿಸಿ ಕಿಸಾನ್ ಸೆಲ್ ಅಧ್ಯಕ್ಷ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನ ಬಂಧನ ಮಾಡಲಾಗಿದೆ. 10ಕ್ಕೂ ಹೆಚ್ಚು ವಾಹನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನತ್ತ ಹೊರಡಲು ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ಸೇರಿದ್ದರು. ವಿಷಯ ತಿಳಿದ ಪೊಲೀಸರು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಸೇರಿದಂತೆ 30 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಈ ಎಲ್ಲಾ ಕಾರ್ಯಕರ್ತರು ಮೋದಿ ಗೋ ಬ್ಯಾಕ್ ಘೋಷಣೆ ಕೂಗಲು ಪ್ಲಾನ್ ಮಾಡಿಕೊಂಡಿದ್ದರು. ತಮ್ಮ ಬಂಧನ ಮಾಡಿದ್ದಕ್ಕೆ ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.








