ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಹೊಸದಾಗಿ 30 ಕೊರೊನಾ ವೈರಸ್ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದಕ್ಷಿಣ ಕನ್ನಡದಲ್ಲಿ ಒಬ್ಬರಿಗೆ, ವಿಜಯಪುರದಲ್ಲಿ ಇಬ್ಬರಿಗೆ, ಬೆಳಗಾವಿಯ 14 ಜನರಿಗೆ, ತುಮಕೂರಿನ ಒಬ್ಬರಿಗೆ, ಬೆಂಗಳೂರಿನ 7 ಜನರಿಗೆ, ಕಲಬುರ್ಗಿಯ ಒಬ್ಬರಿಗೆ ಹಾಗೂ ದಾವಣಗೆರೆಯ ಒಬ್ಬರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.
ಇನ್ನೂ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ ಇದುವರೆಗೆ 21 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರಾಗಿದ್ದಂತ 229 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.








