ಹಾಸನ: ಸುಮಾರು 30ಕ್ಕೂ ಹೆಚ್ಚು ಜನರ ಮೇಲೆ ಹುಚ್ಚು ನಾಯಿಯೊಂದು ದಾಳಿ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ನಗರದ (Hassan) ಸಿದ್ದಯ್ಯನಗರದಲ್ಲಿ ನಡೆದಿದೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದಲ್ಲಿ ಸುರಿದ ಭಾರೀ ಮಳೆಗೆ ಜನ – ಜೀವನ ಅಸ್ತವ್ಯಸ್ಥಗೊಂಡಿತ್ತು. ವಿದ್ಯುತ್ ಸಹ ಇರಲಿಲ್ಲ. ಈ ಸಂದರ್ಭದಲ್ಲಿ ಹುಚ್ಚು ನಾಯಿಯೊಂದು ಏಕಾಏಕಿ ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸಿ ಕಚ್ಚಿದೆ. ಪರಿಣಾಮ ಮೂವತ್ತಕ್ಕೂ ಹೆಚ್ಚು ಮಂದಿಗೆ ಭೀಕರವಾಗಿ ಕಚ್ಚಿ ಗಾಯಗೊಳಿಸಿದೆ.
ಹುಚ್ಚು ನಾಯಿ ಸೆರೆ ಹಿಡಿಯಲು ನಗರಸಭೆ ಸಿಬ್ಬಂದಿ (Hassan City Municipal Council) ಹುಡುಕಾಟ ನಡೆಸಿದ್ದಾರೆ. ಆದರೆ ನಾಯಿ ಪತ್ತೆಯಾಗಿಲ್ಲ. ಹೀಗಾಗಿ ಜನರು ಮನೆಯಿಂದ ಹೊರ ಹೋಗಲು ಹೆದರುತ್ತಿದ್ದಾರೆ. ಹುಚ್ಚು ನಾಯಿ ದಾಳಿಗೆ ಒಳಗಾಗಿರುವವರಿಗೆ ಸೂಕ್ತ ಚಿಕಿತ್ಸೆ ಹಾಗೂ ಚಿಕಿತ್ಸಾ ವೆಚ್ಚವನ್ನು ಭರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.