ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿದಂತೆ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯಲ್ಲಿನ ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನ ಮೊಸರನ್ನ ಸೇವಿಸಿದ್ದರು. ನಂತರ ಮನೆಗೆ ಹೋದ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರಾಗಿದೆ.
ರಾತ್ರೋರಾತ್ರಿ ಅಸ್ವಸ್ಥ ಮಕ್ಕಳನ್ನು ಪೋಷಕರು ಕುಣಿಗಲ್ ತಾಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಹೀಗೆ ಅಸ್ವಸ್ಥರಾದ 10ಕ್ಕೂ ಅಧಿಕ ಮಕ್ಕಳನ್ನು ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಕುಣಿಗಲ್ ಟಿಹೆಚ್ಒ ಡಾ. ಮರಿಯಪ್ಪ, ಹಾಗೂ ಆರೋಗ್ಯಾಧಿಕಾರಿ ಬೋರೆಗೌಡ ಭೇಟಿ ನೀಡಿದ್ದಾರೆ. ಆದರೆ, ಯಾವುದೇ ತೊಂದರೆಯಾಗಿಲ್ಲ.