ನವದೆಹಲಿ : ಕಳೆದ 25 ದಿನಗಳಲ್ಲಿ 44 ಲಕ್ಷಕ್ಕೂ ಹೆಚ್ಚು ಜನರನ್ನು ಅವರ ತವರಿಗೆ ಕಳುಹಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ . ಪ್ರಾರಂಭದಲ್ಲಿ ಕೊರೊನಾ ಸೋಂಕು ಹರಡುವದನ್ನು ತಡೆಯಲು ಲಾಕ್ ಡೌನ್ ಮಾಡಲಾಗಿತ್ತು. ಲಾಕ್ ಡೌನ್ ನಿಂದಾಗಿ ದೇಶದ ಸಾಕಷ್ಟು ಜನ ತಮ್ಮ ಕುಟುಂಬವನ್ನು ಬಿಟ್ಟು ದೂರು ಉಳಿಯುವ ಪರಿಸ್ಥಿತಿ ಬಂದಿತ್ತು. ಇದಾದ ಬಳಿಕ 4.0 ಲಾಕ್ ಡೌನ್ ಅನ್ನು ಸಡಿಲಗೊಳಿಸಲಾಗಿತ್ತು. ಅಲ್ಲದೆ ಬೇರೆ ಬೇರೆ ರಾಜ್ಯಗಳಲ್ಲಿ ಬಂಧಿಯಾಗಿದ್ದ ಜನರನ್ನು ಕರೆ ತರಲು ಅನುಕೂಲವಾಗಲಿ ಎಂದು ರೈಲ್ವೇ ಪ್ರಯಾಣ ಶುರು ಮಾಡಲಾಗಿತ್ತು. ಇದರಿಂದಾಗಿ ಸಾಕಷ್ಟು ಜನ ತಮ್ಮ ತವರಿಗೆ ಬಂದು ಸೇರಿಕೊಂಡಿದ್ದಾರೆ. ಈ ವಿಚಾರವಾಗಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಭಾರತೀಯ ರೈಲ್ವೇ ದೇಶವ್ಯಾಪಿ 3274 ಶ್ರಮಿಕ್ ವಿಶೇಷ ರೈಲುಗಳ ಮೂಲಕ 44 ಲಕ್ಷಕ್ಕೂ ಹೆಚ್ಚು ಜನರನ್ನು ಅವರ ರಾಜ್ಯಗಳಿಗೆ ತಲುಪಿಸಿದೆ. ಈ ಕಾರ್ಯ 25 ದಿನಗಳಲ್ಲಿ ನಡೆದಿದೆ. ಅಲ್ಲದೆ ರೈಲಿನಲ್ಲಿ ಪ್ರಯಾಣಿಸಿದವರಿಗೆ ಉಚಿತ ಊಟ ನೀಡಲಾಗಿದೆ. 1 ಕೋಟಿಗೂ ಅಧಿಕ ನೀರು ಬಾಟಲಿಗಳನ್ನು ನೀಡಿದ್ದೇವೆ ಎಂದು ಹೇಳಿದ್ದಾರೆ.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...







