ಮತ್ತೆ ದೇಶದಲ್ಲಿನ 75 ಲಕ್ಷಕ್ಕೂ ಅಧಿಕ ವಾಟ್ಸಾಪ್ ಗಳನ್ನು ಬ್ಯಾನ್ ಮಾಡಲಾಗಿದೆ.
ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್ಆ್ಯಪ್ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. 7,548,000 ಖಾತೆ ನಿಷೇಧಿಸಲಾಗಿದೆ. ದೂರು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. 19,19,000 ಬಳಕೆದಾರರ ವರದಿಗಳ ನಂತರ ಈ ಖಾತೆ ನಿಷೇಧಿಸಿದೆ ಎನ್ನಲಾಗಿದೆ.
ಕಂಪನಿಯು ದೇಶದಲ್ಲಿ ದಾಖಲೆಯ 9,063 ದೂರುಗಳನ್ನು ಸ್ವೀಕರಿಸಿದೆ ಎಂದು ಹೇಳಿದೆ. ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶ ಕಳುಹಿಸಿದರೆ ವಾಟ್ಸ್ಆ್ಯಪ್ ಬ್ಯಾನ್ ಮಾಡಲಾಗುತ್ತದೆ. ಹೀಗಾಗಿ ಒಂದೇ ತಿಂಗಳಲ್ಲಿ 75 ಲಕ್ಷಕ್ಕೂ ಅಧಿಕ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ.