ತಿರುವನಂತಪುರಂ: ಎನ್‌ಸಿಸಿಯ ತರಬೇತಿ ಶಿಬಿರದಲ್ಲಿ 80ಕ್ಕೂ ಅಧಿಕ ಕೆಡೆಟ್ ಗಳು ವಿಷಾಹಾರ ಸೇವಿಸಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಕೇರಳದ ತರಬೇತಿ ಶಿಬಿರದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಿರಿಯ ಸೇನಾಧಿಕಾರಿ ಮೇಲೆ ಹಲ್ಲೆ ನಡೆಸಿರುವ ವೀಡಿಯೋ ವೈರಲ್ ಆಗಿದೆ. ಸದ್ಯ ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಕೌನ್ಸಿಲರ್ ಮತ್ತು ಎಡಪಕ್ಷದ ನಾಯಕ ಸೇರಿಕೊಂಡು ಸೇನಾಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
80 ಕ್ಕೂ ಹೆಚ್ಚು ಕೆಡೆಟ್‌ಗಳು ಕೆಎಂಎಂ ಕಾಲೇಜಿನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದರು. ಘಟನೆ ಬೆನ್ನಲ್ಲೇ, ಇಬ್ಬರು ವ್ಯಕ್ತಿಗಳು ಇತರರೊಂದಿಗೆ ಆವರಣಕ್ಕೆ ನುಗ್ಗಿ ಎನ್‌ಸಿಸಿ ಬೆಟಾಲಿಯನ್‌ನ ಲೆಫ್ಟಿನೆಂಟ್ ಕರ್ನಲ್ ಕರ್ನೈಲ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ.
ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...








