ತಿರುವನಂತಪುರಂ: ಎನ್‌ಸಿಸಿಯ ತರಬೇತಿ ಶಿಬಿರದಲ್ಲಿ 80ಕ್ಕೂ ಅಧಿಕ ಕೆಡೆಟ್ ಗಳು ವಿಷಾಹಾರ ಸೇವಿಸಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಕೇರಳದ ತರಬೇತಿ ಶಿಬಿರದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಿರಿಯ ಸೇನಾಧಿಕಾರಿ ಮೇಲೆ ಹಲ್ಲೆ ನಡೆಸಿರುವ ವೀಡಿಯೋ ವೈರಲ್ ಆಗಿದೆ. ಸದ್ಯ ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಕೌನ್ಸಿಲರ್ ಮತ್ತು ಎಡಪಕ್ಷದ ನಾಯಕ ಸೇರಿಕೊಂಡು ಸೇನಾಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
80 ಕ್ಕೂ ಹೆಚ್ಚು ಕೆಡೆಟ್‌ಗಳು ಕೆಎಂಎಂ ಕಾಲೇಜಿನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದರು. ಘಟನೆ ಬೆನ್ನಲ್ಲೇ, ಇಬ್ಬರು ವ್ಯಕ್ತಿಗಳು ಇತರರೊಂದಿಗೆ ಆವರಣಕ್ಕೆ ನುಗ್ಗಿ ಎನ್‌ಸಿಸಿ ಬೆಟಾಲಿಯನ್‌ನ ಲೆಫ್ಟಿನೆಂಟ್ ಕರ್ನಲ್ ಕರ್ನೈಲ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ.
ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ವಿದ್ಯಾರ್ಥಿಗಳ...








