ಬೆಂಗಳೂರು: ದೇವರ ಪ್ರಸಾದ ತಿಂದು ನೂರಾರು ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಹನುಮ ಜಯಂತಿ (Hanuma Jayanthi) ಹಿನ್ನೆಲೆ ದೇವಾಲಯಗಳಲ್ಲಿ (Temples) ಪ್ರಸಾದ (Prasadam) ಸೇವಿಸಿ, ಈ ರೀತಿ ಅಸ್ವಸ್ಥರಾಗಿದ್ದಾರೆ. ಈ ಘಟನೆ ಹೊಸಕೋಟೆ (Hoskote) ನಗರದಲ್ಲಿ ನಡೆದಿದೆ.
ಸಿದ್ದಗಂಗಮ್ಮ (65) ಸಾವನ್ನಪ್ಪಿದ ಮಹಿಳೆ ಎನ್ನಲಾಗಿದೆ. ಹನುಮ ಜಯಂತಿ ಹಿನ್ನೆಲೆಯಲ್ಲಿ ಭಕ್ತರು ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿದ್ದರು. ಅಲ್ಲಿ ಪುಳಿಯೊಗರೆ, ಪಾಯಸ ಹಾಗೂ ಲಡ್ಡನ್ನು ಪ್ರಸಾದದ ರೂಪದಲ್ಲಿ ನೆರೆದಿದ್ದ ಭಕ್ತರು ಸ್ವೀಕರಿಸಿದ್ದರು. ಆದರೆ, ನಂತರ ಸೇವಿಸಿದವರಿಗೆ ವಾಂತಿ ಹಾಗೂ ಭೇದಿ ಆರಂಭವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಹೊಸಕೋಟೆ ನಗರದ ಕಾವೇರಿ ನಗರ ನಿವಾಸಿ ಸಿದ್ದಗಂಗಮ್ಮ ಸಾವನ್ನಪ್ಪಿದ ಮಹಿಳೆ ಎನ್ಲನಾಗಿದೆ. 15ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.