ADVERTISEMENT
Wednesday, November 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯುವಜನತೆ, ಮಧ್ಯ ವಯಸ್ಕರಲ್ಲಿ ಹೆಚ್ಚಿದ ಸಾವು : ಸಚಿವ ಡಾ.ಸುಧಾಕರ್ ಆತಂಕ

admin by admin
April 6, 2021
in Newsbeat, State, ರಾಜ್ಯ
dr sudhakar saakshatv
Share on FacebookShare on TwitterShare on WhatsappShare on Telegram

ಯುವಜನತೆ, ಮಧ್ಯ ವಯಸ್ಕರಲ್ಲಿ ಹೆಚ್ಚಿದ ಸಾವು : ಸಚಿವ ಡಾ.ಸುಧಾಕರ್ ಆತಂಕ

dr. sudhakar saakshatvಬೆಂಗಳೂರು, – ರಾಜ್ಯದಲ್ಲಿ ಈವರೆಗೆ 48.05 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಿದ್ದು, ಕರ್ನಾಟಕ 6 ನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

Related posts

lakshmi-katavala-how-to-invite-goddess-lakshmi-wealth-and-prosperity

Astro – ಲಕ್ಷ್ಮಿ ನಿಮ್ಮ ಮನೆಗೆ ಬರಲು ಹೀಗೆ ಮಾಡಿ!

November 18, 2026
ಮೇಕೆದಾಟು ಯೋಜನೆಗೆ ತಕ್ಷಣವೇ ಒಪ್ಪಿಗೆ ನೀಡಿ, ನದಿ ಜೋಡಣೆಯಲ್ಲಿ ರಾಜ್ಯದ ಪಾಲು ಹೆಚ್ಚಿಸಿ: ಪ್ರಧಾನಿ ಮೋದಿಗೆ ದೇವೇಗೌಡ ಒತ್ತಾಯ

ಮೇಕೆದಾಟು ಯೋಜನೆಗೆ ತಕ್ಷಣವೇ ಒಪ್ಪಿಗೆ ನೀಡಿ, ನದಿ ಜೋಡಣೆಯಲ್ಲಿ ರಾಜ್ಯದ ಪಾಲು ಹೆಚ್ಚಿಸಿ: ಪ್ರಧಾನಿ ಮೋದಿಗೆ ದೇವೇಗೌಡ ಒತ್ತಾಯ

November 18, 2026

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 48.05 ಲಕ್ಷ ಜನರಿಗೆ ಸೋಮವಾರದವರೆಗೆ ಕೋವಿಡ್ ಲಸಿಕೆ ನೀಡಲಾಗಿದೆ. ನಿನ್ನೆ ಮಾತ್ರ 1,95,554 ಜನರಿಗೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ ಇಪ್ಪತ್ತೆರಡೂವರೆ ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. 45-59 ವರ್ಷ ವಯಸ್ಸಿನ 10.4 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಲಸಿಕೆ ನೀಡಿಕೆಯಲ್ಲಿ ಕರ್ನಾಟಕ 6 ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದ ನಂತರದ ಸ್ಥಾನದಲ್ಲಿ ನಾವಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಮನವಿ ಸ್ಪಂದಿಸಿ 15 ಲಕ್ಷ ಡೋಸ್ ಲಸಿಕೆಯನ್ನು ಕಳುಹಿಸಿಕೊಟ್ಟಿದೆ ಎಂದರು.

ಯುವಜನರು, ಮಧ್ಯವಯಸ್ಕರ ಸಾವು-ಆತಂಕ

ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಸೋಂಕಿತರು ಒಂದೇ ದಿನ ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆಯೂ ಹೆಚ್ಚುತ್ತಿದ್ದು, ಸೋಮವಾರ ಒಂದೇ ದಿನ 32 ಸಾವಾಗಿದೆ. ಮಧ್ಯವಯಸ್ಕರು, 25 ವರ್ಷದ ಯುವಜನರು ಸಾವಿಗೀಡಾಗಿರುವುದು ಆತಂಕ ಉಂಟುಮಾಡಿದೆ. ಈ ಹಿನ್ನಲೆಯಲ್ಲಿ ಸಾವಿನ ಆಡಿಟ್ ಮಾಡಬೇಕೆಂದು ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಲಾಗಿದೆ. ಮೊದಲ ಅಲೆಗೆ ಹೋಲಿಸಿದರೆ ಎರಡನೇ ಅಲೆ ಬೇಗ ಹರಡುತ್ತಿದೆ. ಇದರ ತೀವ್ರತೆ ಕಡಿಮೆ ಇದೆಯೋ ಅಥವಾ ಹೆಚ್ಚಿದೆಯೋ ಎಂದು ಹೇಳಲು ಈಗಲೇ ಸಾಧ್ಯವಿಲ್ಲ. ಆದರೆ ಅದನ್ನು ಎದುರಿಸಲು ಬೇಕಾದ ಸಿದ್ಧತೆಗಳನ್ನು ಮಾಡಲಾಗಿದೆ ಎಂದರು.

ರಾಜ್ಯಾದ್ಯಂತ 33,697 ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗಾಗಿ ಸಿದ್ಧಪಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಹಿತ ಹಾಸಿಗೆಗಳ ಸಂಖ್ಯೆ 15,733 ಇದೆ. ಈ ಪೈಕಿ 10,083 ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ 20% ಹಾಸಿಗೆ ಮೀಸಲಿಡಲು ಸೂಚಿಸಲಾಗಿದೆ. ಕೋವಿಡ್ ಪ್ರಕರಣ ಹೆಚ್ಚಿದರೆ ಮತ್ತಷ್ಟು ಹಾಸಿಗೆ ಮೀಸಲಿಡಬೇಕಾಗುತ್ತದೆ. ಕೋವಿಡ್ ಯೇತರ ಚಿಕಿತ್ಸೆಗಳು ಕೂಡ ಮುಖ್ಯವಾಗಿದೆ. ಆದ್ದರಿಂದ ಜನರು ಹೆಚ್ಚು ಎಚ್ಚರ ವಹಿಸಬೇಕು ಎಂದರು.

ಚಿತ್ರಮಂದಿರಗಳಲ್ಲಿ ಸಂಪೂರ್ಣ ಸೀಟು ಭರ್ತಿಯನ್ನು ಮುಂದುವರಿಸಬೇಕೆಂಬ ಮನವಿಗಳು ಬಂದಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸರ್ಕಾರದ ನಿರ್ಧಾರವನ್ನು ತಿಳಿಸಲಾಗುವುದು ಎಂದು ನಿರ್ಮಾಪಕರ ಸಂಘದ ನಿಯೋಗಕ್ಕೆ ಹೇಳಿದ್ದೇನೆ. ತಾಂತ್ರಿಕ ಸಲಹಾ ಸಮಿತಿಯವರು ಚಿತ್ರಮಂದಿರ, ಶಾಲೆ, ಕಲ್ಯಾಣ ಮಂಟಪ, ಬಸ್ ಪ್ರಯಾಣ ಸೇರಿ ಪ್ರತಿಯೊಂದು ಚಟುವಟಿಕೆಗಳಲ್ಲೂ ನಡವಳಿಕೆ ಹೇಗಿರಬೇಕೆಂದು 20 ದಿನಗಳ ಹಿಂದೆಯೇ ವರದಿ ನೀಡಿದ್ದರು. ಮುಖ್ಯಮಂತ್ರಿಗಳು ಎಲ್ಲರೊಂದಿಗೆ ಚರ್ಚಿಸಿ ಮಾರ್ಗಸೂಚಿಗಳನ್ನು ಪ್ರಕಟಿಸುತ್ತಾರೆ. ಇದೇ ರೀತಿ ಈ ಪ್ರಕ್ರಿಯೆ ಕೂಡ ನಡೆಯುತ್ತದೆ. ಇದಕ್ಕೆ ನಾವು ಸಲಹೆ ನೀಡಬಹುದು. ಪಕ್ಕದ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಆಗಿದೆ. ಅಂತಹ ಪರಿಸ್ಥಿತಿ ನಮ್ಮ ರಾಜ್ಯಕ್ಕೆ ಬರುವುದು ಬೇಡ. ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.

K. Sudhakarಸೋಂಕು ಬರುವುದೇ ಇಲ್ಲ ಎಂದಲ್ಲ

ಲಸಿಕೆ ಪಡೆದಾಕ್ಷಣ ಸೋಂಕು ಬರುವುದೇ ಇಲ್ಲ ಎಂದಲ್ಲ. ಲಸಿಕೆ ಪಡೆದರೆ ರೋಗ ಬಂದಾಗ ತೀವ್ರತೆ ಇರುವುದಿಲ್ಲ. ಅನೇಕರು ಲಸಿಕೆ ಪಡೆದು ಮನೆಯಲ್ಲಿ ಆರಾಮವಾಗಿದ್ದಾರೆ. ಇನ್ನೂ ಕೆಲವರು ಲಸಿಕೆ ಪಡೆಯದೆಯೇ ನಂತರ ಕೊರೊನಾ ಬಂದು ಐಸಿಯುಗೆ ದಾಖಲಾಗಿರುವ ನಿದರ್ಶನಗಳಿವೆ. ಲಸಿಕೆ ತೆಗೆದುಕೊಂಡರೆ ಎಷ್ಟು ಅನುಕೂಲ ಎಂಬುದಕ್ಕೆ ಉದಾಹರಣೆ ನಮ್ಮ ಕಣ್ಣ ಮುಂದೆಯೇ ಇದೆ. ಆದ್ದರಿಂದ ಲಸಿಕೆ ಕಡ್ಡಾಯವಾಗಿ ಪಡೆಯಿರಿ ಎಂದು ಮನವಿ ಮಾಡಲಾಗುತ್ತಿದೆ ಎಂದರು.

ಆರೋಗ್ಯ ಸಿಬ್ಬಂದಿ ಸಮಾಜಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಲಸಿಕೆ ಪಡೆಯಬೇಕು. ಆರೋಗ್ಯ ಸಿಬ್ಬಂದಿಯೇ ಲಸಿಕೆ ಪಡೆಯದೇ ಇದ್ದಲ್ಲಿ ಜನರಿಗೆ ಹೇಳಲು ಸಾಧ್ಯವಾಗುವುದಿಲ್ಲ ಎಂದೂ ಸಚಿವ ಸುಧಾಕರ್ ಅಭಿಪ್ರಾಯ ಪಟ್ಟರು.

Tags: #saakshatvbengaluruBSYcm bsyCOVID-19Dr. K SudhakarHealth & Medical Education Minister Dr.K.SudhakarHealth Minister Dr K Sudhakarkarnatakakolara
ShareTweetSendShare
Join us on:

Related Posts

lakshmi-katavala-how-to-invite-goddess-lakshmi-wealth-and-prosperity

Astro – ಲಕ್ಷ್ಮಿ ನಿಮ್ಮ ಮನೆಗೆ ಬರಲು ಹೀಗೆ ಮಾಡಿ!

by admin
November 18, 2026
0

ನಮ್ಮಲ್ಲಿ ಲಕ್ಷ್ಮಿಯನ್ನೇ ಒಲಿಸಿಕೊಳ್ಳಬೇಕಾದರೂ ತುಂಬಾ ತರದ ವಿಧಾನಗಳಿವೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ...

ಮೇಕೆದಾಟು ಯೋಜನೆಗೆ ತಕ್ಷಣವೇ ಒಪ್ಪಿಗೆ ನೀಡಿ, ನದಿ ಜೋಡಣೆಯಲ್ಲಿ ರಾಜ್ಯದ ಪಾಲು ಹೆಚ್ಚಿಸಿ: ಪ್ರಧಾನಿ ಮೋದಿಗೆ ದೇವೇಗೌಡ ಒತ್ತಾಯ

ಮೇಕೆದಾಟು ಯೋಜನೆಗೆ ತಕ್ಷಣವೇ ಒಪ್ಪಿಗೆ ನೀಡಿ, ನದಿ ಜೋಡಣೆಯಲ್ಲಿ ರಾಜ್ಯದ ಪಾಲು ಹೆಚ್ಚಿಸಿ: ಪ್ರಧಾನಿ ಮೋದಿಗೆ ದೇವೇಗೌಡ ಒತ್ತಾಯ

by Shwetha
November 18, 2026
0

ರಾಜ್ಯದಲ್ಲಿ ತಲೆದೋರಿರುವ ಭೀಕರ ಮಳೆ ಕೊರತೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಕುಡಿಯುವ ನೀರು ಹಾಗೂ ಕೃಷಿ ಬಿಕ್ಕಟ್ಟನ್ನು ಬಗೆಹರಿಸಲು ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು...

ಭಾರತದ ಏಳ್ಗೆ ಸಹಿಸದ ದುಷ್ಟ ಶಕ್ತಿಗಳಿಂದ ದೇಶ ವಿಭಜನೆಯ ಷಡ್ಯಂತ್ರ: ಮೋಹನ್ ಭಾಗವತ್ ಎಚ್ಚರಿಕೆ

ಭಾರತದ ಏಳ್ಗೆ ಸಹಿಸದ ದುಷ್ಟ ಶಕ್ತಿಗಳಿಂದ ದೇಶ ವಿಭಜನೆಯ ಷಡ್ಯಂತ್ರ: ಮೋಹನ್ ಭಾಗವತ್ ಎಚ್ಚರಿಕೆ

by Shwetha
November 18, 2026
0

ಭಾರತದ ಅಭಿವೃದ್ಧಿ ಹಾಗೂ ಏಳ್ಗೆಯನ್ನು ಸಹಿಸದ ಕೆಲವು ದುಷ್ಟ ಶಕ್ತಿಗಳು ದೇಶದ ಜನರಲ್ಲಿ ಪ್ರತ್ಯೇಕತಾವಾದದ ವಿಷಬೀಜ ಬಿತ್ತಿ, ಸಮಾಜವನ್ನು ಒಡೆಯುವ ಮೂಲಕ ರಾಷ್ಟ್ರವನ್ನು ವಿಭಜಿಸಲು ವ್ಯವಸ್ಥಿತ ಷಡ್ಯಂತ್ರ...

ಮಂಗಳೂರಲ್ಲಿ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ಪೈಲಟ್ ಸಮಯಪ್ರಜ್ಞೆಯಿಂದ 236 ಮಂದಿ ಸುರಕ್ಷಿತ  IndiGo Flight

ಮಂಗಳೂರಲ್ಲಿ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ಪೈಲಟ್ ಸಮಯಪ್ರಜ್ಞೆಯಿಂದ 236 ಮಂದಿ ಸುರಕ್ಷಿತ IndiGo Flight

by Shwetha
November 18, 2026
0

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ವಿಮಾನ ಅವಘಡವೊಂದು ಪೈಲಟ್‌ನ ಸಮಯಪ್ರಜ್ಞೆಯಿಂದ ತಪ್ಪಿದೆ. ಬೆಂಗಳೂರಿಗೆ ತೆರಳಬೇಕಿದ್ದ ಇಂಡಿಗೋ ವಿಮಾನವು ಟೇಕ್‌ಆಫ್ ಪ್ರಕ್ರಿಯೆಯಲ್ಲಿದ್ದಾಗ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ...

ಸ್ವಪಕ್ಷೀಯರ ಫೋನ್ ಕದ್ದಾಲಿಕೆ ಮಾಡಿದವರು ನಮ್ಮನ್ನು ಬಿಡುತ್ತಾರೆಯೇ: ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಹಾಗೂ ನನ್ನ ಫೋನ್ ಕೂಡ ಕದ್ದಾಲಿಕೆಯಾಗುತ್ತಿರಬಹುದು – ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಸ್ವಪಕ್ಷೀಯರ ಫೋನ್ ಕದ್ದಾಲಿಕೆ ಮಾಡಿದವರು ನಮ್ಮನ್ನು ಬಿಡುತ್ತಾರೆಯೇ: ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಹಾಗೂ ನನ್ನ ಫೋನ್ ಕೂಡ ಕದ್ದಾಲಿಕೆಯಾಗುತ್ತಿರಬಹುದು – ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
November 18, 2026
0

ಇಸ್ರೇಲ್ ದೇಶದಿಂದ ಖರೀದಿಸಲಾದ ಪೆಗಾಸಸ್ ತಂತ್ರಜ್ಞಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಪ್ರಯೋಗಿಸಿದ್ದೇ ತಮ್ಮ ಸ್ವಪಕ್ಷೀಯರ ಮೇಲೆ. ಇನ್ನು ಸ್ವಂತ ಪಕ್ಷದವರನ್ನೇ ಬಿಡದವರು ವಿರೋಧ ಪಕ್ಷದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram