ಅತಿ ಹೆಚ್ಚು ಸಕ್ರಿಯ ಕೊರೊನಾ ಕೇಸ್ : ದೇಶದಲ್ಲೇ Bangalore ಬೆಂಗಳೂರಿಗೆ ಅಗ್ರಸ್ಥಾನ
ಬೆಂಗಳೂರು : ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿರುವ ಜಿಲ್ಲೆಯಗಳ ಪಟ್ಟಿಯಲ್ಲಿ ದೇಶದಲ್ಲೇ ಬೆಂಗಳೂರು ಅಗ್ರಸ್ಥಾನದಲ್ಲಿದೆ.
ನಗರದಲ್ಲಿ ಪ್ರತಿದಿನ ಕೊರೊನಾ ಸ್ಫೋಟವಾಗುತ್ತಿದ್ದು, ಸಾವಿರಾರು ಮಂದಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ನಿನ್ನೆ ರಾಜಧಾನಿಯಲ್ಲಿ 16,662 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1,49,624ಕ್ಕೆ ತಲುಪಿದೆ. ಆ ಮೂಲಕ ದೇಶದಲ್ಲೇ ಅತೀ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು ಅಗ್ರ ಸ್ಥಾನಕ್ಕೇರಿದೆ.

ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಪುಣೆ ಇದ್ದು ಇಲ್ಲಿ 1.1 ಲಕ್ಷ ಸಕ್ರಿಯ ಪ್ರಕರಣಗಳಿವೆ.ಬೆಂಗಳೂರು, ಪುಣೆ ಹೊರತುಪಡಿಸಿದರೆ ಭಾರತದ ಉಳಿದೆಲ್ಲಾ ಜಿಲ್ಲೆಗಳು 1 ಲಕ್ಷಕ್ಕೂ ಕಡಿಮೆ ಸಕ್ರಿಯ ಪ್ರಕರಣಗಳನ್ನು ಹೊಂದಿವೆ.









