ಸರ್ದಾರ್ ಪಟೇಲ್ ಸ್ಟೇಡಿಯಂ ಅಲ್ಲ.. ನರೇಂದ್ರ ಮೋದಿ ಸ್ಟೇಡಿಯಂ
ಅಹ್ಮದಾಬಾದ್ : ಗುಜರಾತಿನ ಅಹ್ಮದಾಬಾದ್ ನಲ್ಲಿ ನಿರ್ಮಾಣವಾಗಿರುವ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣದ ಹೆಸರನ್ನು ಬದಲಾವಣೆ ಮಾಡಲಾಗಿದೆ.
ಸರ್ದಾರ್ ಪಟೇಲ್ ಸ್ಟೇಡಿಯಂಯಂತಿದ್ದ ಕ್ರೀಡಾಂಗಣಕ್ಕೆ ಈಗ ಪ್ರಧಾನಿ ನರೇಂದ್ರ ಮೋದಿ ಸ್ಟೇಡಿಯಂ ಅಂತಾ ನಾಮಕರಣ ಮಾಡಲಾಗಿದೆ.
ಹೌದು..! ಇಂದು ಇಂದು ಅತಿದೊಡ್ಡ ಕ್ರೀಡಾಂಗಣವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟನೆ ಮಾಡಿದ್ರು. ಈ ಹಿಂದೆ ಇದನ್ನ ಮೊಟೆರಾ ಕ್ರೀಡಾಂಗಣ ಎಂದೇ ಕರೆಯಲಾಗುತ್ತಿತ್ತು.
ಇದೀಗ ಆ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಎಂದು ನಾಮಕರಣ ಮಾಡಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧಿಕೃತವಾಗಿ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಘೋಷಿಸಿದರು.
ಇನ್ನು ಈ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುಜರಾತ್ ಗವರ್ನರ್ ಆಚಾರ್ಯ ದೇವರತ್, ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು, ಬಿಸಿಸಿಐ ಸೆಕ್ರೆಟರಿ ಜಯ್ ಶಾ ಉಪಸ್ಥಿತರಿದ್ದರು.