Raichur : ಅಗ್ನಿ ಅವಘಡದಲ್ಲಿ ತಾಯಿ ಮಕ್ಕಳು ಸಜೀವ ದಹನ….
ಅಗ್ನಿ ಅವಘಡದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಇಬ್ಬರು ಸಜೀವ ದಹನವಾಗಿರುವ ಘಟನೆ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ನಡೆದಿದೆ.
ಮನೆಯಲ್ಲಿದ್ದ ಎ ಸಿ ಶಾರ್ಟ್ ಸರ್ಕೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಮೃತರನ್ನು ಮಂಡ್ಯ ಮೂಲದ ರಂಜಿತಾ(33), ಮಕ್ಕಳಾದ ಮೃದಲ(13), ತಾರುಣ್ಯ(5) ಎಂದು ಗುರುತಿಸಲಾಗಿದೆ. ಶಕ್ತಿನಗರದ ಕೆಪಿಸಿ ಕ್ವಾಟ್ರಸ್‌ನಲ್ಲಿ ವಾಸವಿದ್ದರು . ಆದರೇ ಘಟನೆಗೆ ಕಾರಣ ಇನ್ನೂ ಅಸ್ಪಷ್ಟವಾಗಿದೆ.
ಮೃತ ರಂಜಿತಾ ಪತಿ ಸಿದ್ದಲಿಂಗಯ್ಯ ಸ್ವಾಮಿ ಆರ್‌ಟಿಪಿಎಸ್‌ನಲ್ಲಿ ಎಇಇ ಆಗಿ ಕೆಲಸ ಮಾಡುತ್ತಿದ್ದಾರೆ. ಇವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಅವಘಡ ನಡೆದಿದೆ. ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ.
Mother and 2 children died in a fire accident at home in Raichur