ಬೆಂಗಳೂರು: ಬೈಕ್ ಡಿಕ್ಕಿಯಾಗಿ ಕೆಳಗೆ ಬಿದ್ದ ತಾಯಿ ಹಾಗೂ ಇಬ್ಬರು ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಹೊಸಕೋಟೆ ಹತ್ತಿರ ರಸ್ತೆ ದಾಟುತ್ತಿದ್ದ ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಬೈಕ್ ಡಿಕ್ಕಿಯಾಗಿದೆ. ಆಗ ಅವರೆಲ್ಲ ರಸ್ತೆಗೆ ಬಿದ್ದಿದೆ. ಹೀಗೆ ಬಿದ್ದವರ ಮೇಲೆ ಆಂಧ್ರ ಸಾರಿಗೆ ಬಸ್ ಹರಿದಿದೆ. ಘಟನೆಯಲ್ಲಿ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನುಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಥಳೀಯರು ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.