ಮಹಿಳೆಯೊಬ್ಬರು ತನ್ನ ಮಗುವನ್ನು ಕೊಲೆ ಮಾಡಿ ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಮಂಗಳೂರಿನ ಗುಜ್ಜರಕೆರೆ ಹತ್ತಿರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಫಾತಿಮಾ ರುಕಿಯಾ ಎಂಬುವವರೇ ತನ್ನ ಮಗ ಅಬ್ದುಲ್ಲಾ ಹೂದ್ ನನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಫಾತಿಮಾ ಅವರು ಬಾತ್ ಟಬ್ ನಲ್ಲಿ ತಮ್ಮ ನಾಲ್ಕೂವರೆ ತಿಂಗಳಿನ ಮಗುವನ್ನು ಮುಳುಗಿಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕೊಲೆಯಾದ ನಂತರ ರೂಮಿನ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.