Vijayapura | ಮಾನಸಿಕ ಖಿನ್ನತೆ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ವಿಜಯಪುರ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂದಗಿ ತಾಲೂಕಿನ ಹಂದಿನಗೂರು ಗ್ರಾಮದಲ್ಲಿ ನಡೆದಿದೆ.
ಅವ್ವಮ್ಮಾ ಶ್ರೀಶೈಲ ಗುಬ್ಬೇವಾಡ (32) ಮಕ್ಳಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಈಕೆ ಕಳೆದ ಆರು ತಿಂಗಳಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಂತೆ.

ಕುರಿ ಕಾಯಲು ಪತಿ ಶ್ರೀಶೈಲ ಹೋಗಿದ್ದ ವೇಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ಹೋಗಿದ್ದ ಸಂದರ್ಭದಲ್ಲಿ 3 ವರ್ಷದ ಹಾಗೂ 1 ವರ್ಷದ ಹೆಣ್ಣು ಮಗುವಿನೊಂದಿಗೆ ಅವ್ವಮ್ಮಾ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ದೇವರಹಿಪ್ಪರಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹಗಳನ್ನು ಬಾವಿಯಿಂದ ಮೇಲೆತ್ತಿರುವ ಗ್ರಾಮಸ್ಥರು ಮರಣೋತ್ತರ ಪರೀಕ್ಷೆಗೆ ಶವಗಳನ್ನು ಸಿಂದಗಿ ತಾಲೂಕಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.








