ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ಸರಸ್ವತಿ ಕಿರವೆ(27), ದೀಪಿಕಾ(7), ರೀತಿಕಾ(4) ಸಾವನ್ನಪ್ಪಿದವರು ಎನ್ನಲಾಗಿದೆ.
ತಾಯಿ ಸರಸ್ವತಿ ತನ್ನ ಎರಡೂ ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ್ದಾರೆ ಎನ್ನಲಾಗಿದೆ. ಕಳೆದ 8 ವರ್ಷಗಳ ಹಿಂದೆ ಸಾಂಗ್ಲಿಯ ನಿತಿನ್ ಕಿರವೆ ಜೊತೆ ಸರಸ್ವತಿಯ ವಿವಾಹವಾಗಿತ್ತು. ಆದರೆ, ಗಂಡನ ಕಿರುಕುಳ ತಾಳಲಾರದೆ ಸರಸ್ವತಿ ತವರು ಮನೆ ಸೇರಿದ್ದರು. ಆದರೂ ಕೌಟುಂಬಿಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು, ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ.








