ಮೂವರು ಮಕ್ಕಳನ್ನ ಕೃಷಿ ಹೊಂಡಕ್ಕೆ ತಳ್ಳಿ ತಾನು ಆತ್ಮಹತ್ಯೆ ಮಾಡಿಕೊಂಡ ತಾಯಿ ..
ತನ್ನ ಮೂರು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿ ನಂತರ ತಾನೂ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾದ ತೋಟವೊಂದರಲ್ಲಿ ನಡೆದಿದೆ.
27 ವರ್ಷದ ಅನಿತಾ ಪಿಂಟು ಜಾಧವ್, ತನ್ನ ಮಕ್ಕಳಾದ 6 ವರ್ಷದ ಪ್ರವೀಣ, 4 ವರ್ಷದ ಸುದೀಪ ಮತ್ತು 2 ವರ್ಷದ ಮಮದಿಕಾಳನ್ನು ಕೃಷಿ ಹೊಂಡಕ್ಕೆ ತಳ್ಳಿ ನಂತರ ಅನಿತಾ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಾಲ್ಕು ಜನರ ಮೃತದೇಹವನ್ನು ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.