ಕಲಬುರಗಿ: ʻತಾಯಿ ನಮ್ಮ ಅತ್ತೆ ಬೇಗ ಸಾಯಬೇಕುʼ ಎಂದು ಮಹಿಳೆಯೊಬ್ಬರು ನೋಟಿನ ಮೇಲೆ ಬರೆದು ದೇವಿಯ ಹುಂಡಿಗೆ ಹಾಕಿರುವ ಘಟನೆ ನಡೆದಿದೆ.
ಕಲಬುರಗಿ (Kalaburagi) ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅಫಜಲಪುರದ ಸುಕ್ಷೇತ್ರ ಘತ್ತರ್ಗಿ ಭಾಗ್ಯವಂತಿ ದೇವಸ್ಥಾನದ ಹುಂಡಿಯಲ್ಲಿ ಈ ನೋಟ್ (currency) ಪತ್ತೆಯಾಗಿದ್ದು, ಕಳೆದ ಕೆಲ ತಿಂಗಳ ಹಿಂದೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ಮಹಿಳೆ 20 ರೂ. ನೋಟಿನ ಮೇಲೆ ಅತ್ತೆ ಸಾಯಲೆಂದು ಬರಹ ಬರೆದು ಭಾಗ್ಯವಂತಿ ದೇವಿಯ ಹುಂಡಿಗೆ ಹರಕೆ ಹೊತ್ತಿದ್ದಾರೆ.
ಭಾಗ್ಯವಂತಿ ದೇವಿಯ ಹುಂಡಿ ಎಣಿಕೆ ಮಾಡುವ ವೇಳೆ ಅತ್ತೆ ಸಾಯಲೆಂದು ಹರಕೆ ಹೊತ್ತು ಕಾಣಿಕೆ ಅರ್ಪಿಸಿರುವ ನೋಟ್ ಪತ್ತೆಯಾಗಿದೆ. ಸದ್ಯ ಈ ಬರಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಲಿಂಡರ್ ಸ್ಫೋಟ ಪ್ರಕರಣ; 4ಕ್ಕೆ ಏರಿದ ಮಾಲಾಧಾರಿ ಸಾವಿನ ಸಂಖ್ಯೆ
ಹುಬ್ಬಳ್ಳಿ: ಉಣಕಲ್ನ ಅಚ್ಚವ್ವ ಕಾಲೊನಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಮತ್ತೊಬ್ಬರು ಅಯ್ಯಪ್ಪ ಮಾಲಾಧಾರಿ (Ayyappa Devotees) ಸಾವನ್ನಪ್ಪಿದ್ದು, ಆ ಮೂಲಕ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ರಾಜೂ...